This is the title of the web page
This is the title of the web page
Local News

ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ


ರಾಯಚೂರು : ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ ಒದಗಿಸುವ ಪ್ರಾಮಾಣಿಕ ಪ್ರಯತ್ನದೊಂದಿಗೆ ರೈತರ ನಿಗದಿತ ಬೆಲೆ ಮಾರಾಟ ಮಾಡುವಂತಹ ಪ್ರಯತ್ನ ಮಾಡುತ್ತೇನೆ ಎಂದು ನಗರ ಶಾಸಕಾಂಗಕ್ಕೆ ಶಿವರಾಜ್ ಪಾಟೀಲ್ ಹೇಳಿದರು.

ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ನೇರವಾಗಿ ತಮ್ಮ ಬೆಳೆಗಳನ್ನು ಮಾರಾಟ ಮಾಡುವ ಅವಕಾಶ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಲು ಅನೇಕ ಅಡೆತಡೆಗಳು ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸಿ ಮಾರುಕಟ್ಟೆ ಸ್ಥಾಪನೆ ಮಾಡಲಾಯಿತು ಎಂದರು. ಇದು ರೈತರ ಉತ್ಪನ್ನ ಮಾರುಕಟ್ಟೆ ರೈತರಿಗೆ ಸೀಮಿತವಾಗಬೇಕು. ರೈತರ ಬೆಳೆದ ಉತ್ಪನ್ನಗಳನ್ನು ಸೂಕ್ತ ಬೆಲೆಗೆ ಖರೀದಿ ವ್ಯಾಪಾರಸ್ಥರು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದರು.‌ರೈತರ ಬೆಲೆಗಳನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಮೋಸ ಆಗದಂತೆ ಅನುಕೂಲವಾಗುವ ನಿಟ್ಟಿನಲ್ಲಿ ಸೂಕ್ತ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತೇನೆ ಎಂದರು. ನೂತನ ಸಂತೆ ಮಾರುಕಟ್ಟೆಯ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಆದ್ಯತೆ ನೀಡುತ್ತೇನೆ ಎಂದರು. ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರಾಟ ಪ್ರಾಂಗಣ ಸ್ಥಾಪನೆ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಸ್ಥಳೀಯ ಕೃಷಿ ಉತ್ಪನ್ನಗಳಾದ ತರಕಾರಿ, ಹಣ್ಣು ಹಂಪಲು ಇಲ್ಲಿನ ಮಾರುಕಟೆಯಲ್ಲಿ ಸುಲಭ ದರದಲ್ಲಿ ಖರೀದಿಸಲು ಗ್ರಾಹಕರಿಗೆ ಅನುಕೂಲ ಆಗಬೇಕು ಎಂದರು.


[ays_poll id=3]