![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಗ್ಯಾರಂಟಿ ಕಾರ್ಡ್ ಸದುಪಯೋಗ ಪಡೆದುಕೊಳ್ಳಲು, ಬಡವರಿಗೆ ಮಾತ್ರ ಅವಕಾಶವಿದೆ ಎಂದು ಹೇಳಿದ ನಿಟ್ಟಿನಲ್ಲಿ, ರಾಜ್ಯಾದ್ಯಂತ ನಾ ಮುಂದು ತಾ ಮುಂದು ಅಂತ ಪಡಿತರ ಚೀಟಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಸಾರ್ವಜನಿಕರು.
ಇದೆಲ್ಲವನ್ನೂ ಗಮನಿಸಿರುವ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ಆಹಾರ, ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ಸರಬರಾಜು ಇಲಾಖೆಯ ವೆಬ್‌ಸೈಟ್‌ಗೆ ಮೊರೆ ಹೋಗಿದ್ದಾರೆ. ಕೆಲವರು ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್‌ಗಳ ಸಹಾಯದಿಂದ ಆಹಾರ ಡಾಟ್ ಕೆಎಆರ್ ಡಾಟ್ ಎನ್‌ಐಸಿ ಡಾಟ್ ಇನ್ ವೆಬ್‌ಸೈಟ್ ಓಪನ್ ಮಾಡಲು ಪ್ರಯತ್ನಿಸುತ್ತಿದ್ದರೆ ಇನ್ನು ಕೆಲವರು ಸಮೀಪದ ಸೈಬರ್ ಸೆಂಟರ್‌ಗಳಿಗೆ ಹೋಗಿ ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೆಚ್ಚು ಜನ ಒಂದೇ ಸಲಕ್ಕೆ ಪ್ರಯತ್ನ ಮಾಡುತ್ತಿರುವುದರಿಂದ ವೆಬ್‌ಸೈಟ್ ನಿಧಾನವಾಗಿದೆ. ಕೆಲವೆಡೆ ಓಪನ್ ಕೂಡ ಆಗುತ್ತಿಲ್ಲ.
ಈ ಸಮಸ್ಯೆಯನ್ನು ಮನಗಂಡ ಆಹಾರ ಇಲಾಖೆಯವರು ಹೊಸ ಪಡಿತರ ಚೀಟಿ ನೀಡುವ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ”ಹೊಸ ಪಡಿತರ ಚೀಟಿಗಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ” ಎಂದು ತಮ್ಮ ವೆಬ್‌ಸೈಟ್‌ನಲ್ಲೇ ಸ್ಪಷ್ಟವಾಗಿ ನಮೂದಿಸಿಬಿಟ್ಟಿದ್ದಾರೆ. ಇದರಿಂದಾಗಿ ನೂತನ ಸರ್ಕಾರದ ಉಚಿತ ಕೊಡುಗೆಗಳ ಲಾಭ ಪಡೆಯುವ ಸಲುವಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಮಾಡಿಸಲು ಹೊರಟಿದ್ದ ಜನರಿಗೆ ನಿರಾಸೆಯಾಗಿದೆ.
![]() |
![]() |
![]() |
![]() |
![]() |
[ays_poll id=3]