
ರಾಯಚೂರು : ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ, ನಾಳೆ ಜುಲೈ 27 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಅವರು ರಜೆ ಘೋಷಸಿ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ರಜೆ ಘೋಷಣೆ ಮಾಡಲಾಗಿದೆ. ರಾಯಚೂರು ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ್ ಹವಾಮಾನ ವರದಿ ಆಧರಿಸಿ ರಜೆಯ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆ ವರದಿ ಆಧರಿಸಿ ಮತ್ತೆ ರಜೆ ನಿರ್ಧಾರಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸದ್ಯ ಒಂದು ದಿನಕ್ಕೆ ಮಾತ್ರ ರಜೆ ಘೋಷಿಸಿರುವ ಜಿಲ್ಲಾಡಳಿತ, ಗ್ರಾಮೀಣ ಭಾಗದಿಂದ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಹಿನ್ನೆಲೆ ಆದೇಶ ಹೊರಡಿಸಲಾಗಿದೆ ಎಂದರು.
![]() |
![]() |
![]() |
![]() |
![]() |
[ays_poll id=3]