K2kannadanews.in
Shocking News ಬೆಂಗಳೂರು : ಸಿಲಿಕಾನ್ ಸಿಟಿಯ ಭುವನೇಶ್ವರಿ ನಗರದಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು (Food Poisoning) ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಮಗು ಮೃತಪಟ್ಟ ಪಾಲಕರು ಗಂಬೀರವಾದ ಘಟನೆ ನಡೆದಿದೆ.
ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲರಾಜ್ ಮಗನಿಗಾಗಿ ಕೇಕ್ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಮೂವರು ಕೇಕ್ ಸೇವಿಸಿದ್ದರು. ಕೇಕ್ ಸೇವಿಸಿದ ಬೆನ್ನಲ್ಲೇ ಮೂವರು ಅಸ್ವಸ್ಥಗೊಂಡಿದ್ದಾರೆ. ಧೀರಜ್ (5) ಎಂಬ ಮಗು ಸಾವನ್ನಪ್ಪಿದ್ದು, ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ.
ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಧೀರಜ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಕೇಕ್‌ನಲ್ಲಿ ಯಾವ ಅಂಶಗಳಿಂದ ಅಸ್ವಸ್ಥರಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪುಡ್ ಪಾಯಿಸನ್ ನಿಂದ ಸಾವು ಸಂಭವಿಸಿರ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಯಾರೋ ಆರ್ಡರ್ ಮಾಡಿ ಕ್ಯಾನ್ಸಲ್ ಮಾಡಿದ ಕೇಕ್ ತಿಂದ ಕುಟುಂಬ. ಹೌದು ಮೃತ ಬಾಲಕ ಧೀರಜ್ ತಂದೆ ಬಾಲರಾಜ್ ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ವ್ಯಕ್ತಿಯೊಬ್ಬರು ಆರ್ಡರ್ ಮಾಡಿದ ಕೇಕ್ ಅನ್ನು ನಂತರ ಕ್ಯಾನ್ಸಲ್ ಮಾಡಿದ್ದರಂತೆ. ಹೀಗಾಗಿ ಬಾಲರಾಜ್ ಕೇಕ್ ಮನೆಗೆ ತಂದು ಕುಟುಂಬದೊಂದಿಗೆ ತಿಂದಿದ್ದಾರೆ.