This is the title of the web page
This is the title of the web page
Crime NewsLocal News

ಕರ್ತವ್ಯದಲ್ಲಿದ್ದಾಗಲೇ ವೈದ್ಯ ಹಠಾತ್ ಹೃದಯಾಘಾತದಿಂದ ಸಾವು..


ರಾಯಚೂರು : ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದಿಂದ ಯುವ ಸಮುದಾಯ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಕರ್ತವ್ಯದಲ್ಲಿದ್ದ ಯುವ ವೈದ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

ಹೌದು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯರಾಗಿದ್ದಾರೆ. ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು.

ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಆಸ್ಪತ್ರೆ ಮೇಲ್ಮಹಡಿಯಲ್ಲಿದ್ದ ಮನೆಗೆ ಹೋಗುತ್ತಿದ್ದಾಗಲೇ ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆ, ಹಠಾತ್ ಹೃದಯಘಾತವಾಗಿ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.


[ays_poll id=3]