This is the title of the web page
This is the title of the web page
State NewsVideo News

ಬಾಲಕನ ಶ್ವಾಸಕೋಶದಲ್ಲಿದ್ದ ಗುಂಡು ಸೂಜಿ ಹೊರತೆಗೆದ ರಿಮ್ಸ್ ವೈದ್ಯರು


K2kannadanews.in

ರಾಯಚೂರು : ಶಾಲೆಯಲ್ಲಿ(school) ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ (Accidentally)ಗುಂಡುಪಿನ್ನು (Tachin)ನುಂಗಿ ಅಶ್ವಸ್ಥ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು(student) ರಿಮ್ಸ್ ಆಸ್ಪತ್ರೆ(RIMS hospital) ವೈದ್ಯರು ಬ್ರಾಂಕೋಸ್ಕೋಪ್ (Bronchoscope)ಶಸ್ತ್ರ ಚಿಕಿತ್ಸೆ ಮೂಲಕ ಗುಂಡುಪಿನ್ನು ತೆಗೆದು ಬಾಲಕನ ಜೀವ ಕಾಪಾಡಿದ್ದಾರೆ.

ರಾಯಚೂರು(Raichur) ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ ಕ್ಯಾಂಪ್ ನ 13ವರ್ಷದ ಶಿವಕುಮಾರ(shivakumar) ಬಾಲಕ ಶಾಲೆಯಲ್ಲಿ(school) ಆಟವಾಡುವಾಗ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ(lungs)ಸೇರಿತ್ತು, ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್(RIMS) ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶವನ್ನು ಕ್ಷ ಕಿರಣವನ್ನು ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡು ಇರುವುದು ಖಚಿತಪಡಿಸಿಕೊಂಡು, ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಸ್ತ್ರ ಚಿಕಿತ್ಸೆ ತಂಡದಲ್ಲಿ ಇಎನ್‌ಟಿ(ENT) ನುರಿತ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ನುರಿತ ಅರವಳಿಕೆ ತಜ್ಞ ವೈದ್ಯ ಡಾ.ಕಿರಣ ನಾಯಕ, ಡಾಕ್ಟರ್ ಮಲ್ಲಿಕಾರ್ಜುನ್ .ಕೆ ಪಾಟೀಲ್, ಡಾ.ಸಿಂಧು ಪಿಜಿ, ಡಾ.ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇನ್ನು ಬಾಲಕನ ಕುಟುಂಬಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಬಾಲಕ ಆರಾಮವಾಗಿ ಶಸ್ತ್ರಚಿಕಿತ್ಸೆ ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.


[ays_poll id=3]