
ಸಿರವಾರ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭತ್ತದ ಗದ್ದೆಯಲ್ಲಿ ಕಾರು ಮುಗುಚಿಬಿದ್ದ ಘಟನೆ ನೀಲೊಗಲ್ ಕ್ಯಾಂಪ್ ಬಳಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರಬರ ತಾಲೂಕಿನ ನೀಲೋಗಲ್ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರು ಅತಿ ವೇಗವಾಗಿ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಿಂದ ಶ್ರೀಶೈಲದ ಕಡೆ ಹೊರಟಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಸಿರವಾರ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಕಾರು ವಿದ್ಯುತ್ ಕಂಬಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಬೆಳಗಿನ ಜಾವದಿಂದ ವಿವಿಧ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು, ಸಿರವಾರ ಜೆಸ್ಕಾಂ ಶಾಖಾಧಿಕಾರಿ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಕಂಬ ಬದಲಾಯಿಸುವ ಮೂಲಕ ಸಮಸ್ಯೆ ಬಗೆಹರಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]