This is the title of the web page
This is the title of the web page
State News

ಜಿಲ್ಲೆಯಲ್ಲಿ 4 ತಾಲೂಕು ಬರ ಪರಿಸ್ಥಿತಿ : ಘೋಷಣೆ


K2 ನ್ಯೂಸ್ ಡೆಸ್ಕ್ : ಮಳೆ ಕೊರತೆಯಿಂದ ರಾಯಚೂರು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ ಎಂದು, ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು  ಬರಪೀಡಿತ ಎಂಬುದಾಗಿ ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ಮಾನ್ವಿ, ರಾಯಚೂರು ಮತ್ತು ಸಿರವಾರ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ ಎಂದು ವರದಿಯಲ್ಲಿ ತಿಳಿಸಿದ ಕಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ರನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲೂಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲ ಕಾಲಕ್ಕೆ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಹೇಳಿದೆ.


[ays_poll id=3]