ಪ್ರತಿನಿತ್ಯ ಮೊಟ್ಟೆ ತಿನ್ನುವುದೂ ಆರೋಗ್ಯಕ್ಕೆ ಹಾನಿಕಾರಕ
![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಅತಿ ಕಿರಿಯ ವಯಸ್ಸಿನವರು ಕೂಡಾ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ಸಂದರ್ಭಗಳಲ್ಲಿ ಮನಸ್ಸಿನಲ್ಲಿ ನಾನಾ ಪ್ರಶ್ನೆಗಳು ಓಡಾಡುತ್ತವೆ. ಹೃದಯಾಘಾತಕ್ಕೆ ಕಾರಣ ಹಲವು ಇರಬಹುದು. ಅದರಲ್ಲಿ ನಾವು ಸೇವಿಸುವ ಆಹಾರ ಕೂಡಾ ಸೇರಿದೆ. ಮೊಟ್ಟೆ ಸೇವನೆಗೂ ಹೃದಯಾಘಾತಕ್ಕೂ ಸಂಬಂಧವಿದೆ ಎಂದು ತಿಳಿದರೆ ಖಂಡಿತವಾಗಿಯೂ ಅಚ್ಚರಿಯಾಗಬಹುದು.
ಹೆಲ್ತ್‌ಲೈನ್‌ನ ವರದಿಯ ಪ್ರಕಾರ, ಒಂದು ದಿನಕ್ಕೆ ಒಂದು ಮೊಟ್ಟೆಯನ್ನು ತಿಂದರೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದಿಲ್ಲ. ಆದರೆ ಮೊಟ್ಟೆಗಳನ್ನು ಅತಿಯಾಗಿ ತಿನ್ನುವುದು ಹೃದಯದ ಆರೋಗ್ಯಕ್ಕೆ ಹಾನಿಕರವಾಗಿ ಸಾಬೀತಾಗುವುದು. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಇದೆ ಎನ್ನುವುದು ತಜ್ಞರು ಅಭಿಪ್ರಾಯ. ಹೀಗಾಗಿ ಕೊಲೆಸ್ಟ್ರಾಲ್ ಇದ್ದವರು, ಹೃದ್ರೋಗ ಇರುವವರು ಮೊಟ್ಟೆ ಸೇವನೆಯ ಬಗ್ಗೆ ಎಚ್ಚರ ವಹಿಸುವುದು ಅಗತ್ಯ. ಮುನ್ನೆಚ್ಚರಿಕೆಯಾಗಿ ಮೊಟ್ಟೆಯಿಂದ ದೂರ ಇರುವುದೇ ಸೂಕ್ತ. ಇನ್ನು ಮೊಟ್ಟೆ ತಿನ್ನಲೇ ಬೇಕು ಎಂದಿದ್ದರೆ ಅದರ ಮೊಟ್ಟೆಯ ಬಿಳಿಭಾಗವನ್ನು ಮಾತ್ರ ತಿನ್ನುವುದು ಉತ್ತಮ ಎಂದು ಹೇಳಲಾಗುತ್ತದೆ. ಮೊಟ್ಟೆಯ ಬಿಳಿಯಲ್ಲಿ ಕೊಲೆಸ್ಟ್ರಾಲ್ ಇರುವುದಿಲ್ಲ.
![]() |
![]() |
![]() |
![]() |
![]() |