K2kannadanews.in
ED Attack ರಾಯಚೂರು : ಗ್ರಾಮಾಂತರ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು ರಾಯಚೂರು ನಗರದ ಆರ್ ಆರ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಇಡೀ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂ ಬೆಳಗ್ಗೆ ಮನೆ ಮೇಲೆ ದಾಳಿ ನಡೆಸಿರೋ ಇಡಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಒಂದುಕಡೆ SIT ತನಿಖೆ ಎದುರಿಸುತ್ತಿರುವಾಗಲೇ ಇಡಿ ದಾಳಿ ನಡೆಸಿದೆ.
ಬೆಂಗಳೂರು ಪಾಸಿಂಗ್ ಹೊಂದಿರುವ ಒಂದೇ ಕಾರಿನಲ್ಲಿ ಬಂದಿರುವ ಇಡಿ ಅಧಿಕಾರಿಗಳು ಮನೆ ಮುಂದೆ CRPF ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜನೆ ಮಾಡಿದ್ದಾರೆ.