
K2 ಪೊಲಿಟಿಕಲ್ ನ್ಯೂಸ್ : ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು 25 ರಿಂದ 18ಕ್ಕೆ ಇಳಿಸಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಬಿಜೆಪಿ ಸದಸ್ಯ ಸುಶೀಲ್ ಮೋದಿ ನೇತೃತ್ವದ ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿಯಿಂದ ಈ ಕುರಿತು ಶಿಫಾರಸು ಮಾಡಲಾಗಿದೆ.
ಪ್ರಸ್ತುತ ಇರುವ ನಿಯಮಗಳ ಪ್ರಕಾರ ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ 25 ವರ್ಷ, ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ 30 ವರ್ಷ, ಮತದಾರರಾಗಿ ನೋಂದಾಯಿಸಲು 18 ವರ್ಷ ಆಗಿರಬೇಕು.
ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ ಮೊದಲಾದ ದೇಶಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುಗಾರಿಕೆ ಕನಿಷ್ಠ ವಯೋಮಿತಿ 18 ವರ್ಷಕ್ಕೆ ಇರಬೇಕು. ಇದರಿಂದ ಯುವಕರು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ ಎಂದು ಹೇಳಲಾಗಿದೆ.
![]() |
![]() |
![]() |
![]() |
![]() |
[ays_poll id=3]