
ರಾಯಚೂರು : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ಕೊರತೆ ನಿವಾರಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಆಶ್ರಯ ಕಾಲೋನಿ ಹತ್ತಿರ ಇರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಾದ ಶೌಚಾಲಯ ನೀರಿನ ವ್ಯವಸ್ಥೆ, ಮತ್ತು ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೋಣೆಗಳಿಲ್ಲ, ಶಾಲೆಯ ಕಾಂಪೌಂಡ್ ಗೋಡೆ ಇಲ್ಲದೆ ಹಂದಿಗಳು ಒಳ ನುಗ್ಗುತ್ತಿವೆ ಎಂದು ಆಗ್ರಹಿಸಿದರು.
ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳಿಗೆ ಪಾಠ ಹೇಳುವುದು ಶಿಕ್ಷಕರಿಗೆ ಕಷ್ಟವಾಗುತ್ತಿದೆ. ಮಕ್ಕಳಿಗೆ ಒಂದು ಕೋಣೆಯಲ್ಲಿ ಎರಡು ತರಗತಿಗಳನ್ನು ತೆಗೆದುಕೊಂಡು ಪಾಠ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಕೇವಲ ಮೂರು ಶಿಕ್ಷಕರು ಮಾತ್ರ ಇದ್ದಾರೆ. ಇದರಿಂದ ಯಾವೊಬ್ಬ ಶಿಕ್ಷಕನು ರಜೆ ಹಾಕಿದರೆ ಬೋಧನೆ ಮುಂದೆ ಸಾಗುವುದಿಲ್ಲ. ಇದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಕುಂಠಿತಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
![]() |
![]() |
![]() |
![]() |
![]() |
[ays_poll id=3]