This is the title of the web page
This is the title of the web page
Politics News

ಸಾಮಾಜಿಕ ಪರಿವರ್ತನೆಯ ಚಿಂತನೆ ಸಾಕಾರ : ಸಿಎಂ


K2 ಪೊಲಿಟಿಕಲ್ ನ್ಯೂಸ್ : ರಾಜ್ಯದ ಲಂಬಾಣಿ ತಾಂಡಾ, ಹಟ್ಟಿ, ಹಾಡಿ, ಗೊಲ್ಲರಹಟ್ಟಿ, ವಡ್ಡರ ಹಟ್ಟಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ, ಸರ್ಕಾರದ ಸೌಲಭ್ಯಗಳ ಪಡೆಯಲು ಅನುಕೂಲ ಕಲ್ಪಿಸುವ ಕಾರ್ಯಕ್ರಮವಾಗಿದ್ದು, ಈ ಮೂಲಕ ಸಾಮಾಜಿಕ ಪರಿವರ್ತನೆಯ ಚಿಂತನೆಯನ್ನು ಸಾಕಾರಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಜೊತೆಗೆ ಸಾಮಾಜಿಕ ಭದ್ರತೆಯನ್ನು ಸಾಮಾಜಿಕ ಪರಿವರ್ತನೆಯನ್ನು ಮಾಡಲಾಗುತ್ತಿದೆ. ಪ್ರಧಾನಿ ಮೋದಿಯವರಿಂದ ಹಕ್ಕುಪತ್ರಗಳನ್ನು ಪಡೆಯುತ್ತಿರುವುದು ಈ ಜನಾಂಗದವರಿಗೆ ಗೌರವವನ್ನು ತಂದುಕೊಟ್ಟಿದೆ ಎಂದರು.

ಕಂದಾಯ ಕ್ರಾಂತಿ : ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ನೀಡಿ, ಪ್ರದೇಶವನ್ನು ಕಂದಾಯ ಗ್ರಾಮಗಳೆಂದು ಘೋಷಿಸಿರುವುದರಿಂದ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲ ಕಲ್ಪಿಸುವ ಮೂಲಕ ರಾಜ್ಯದಲ್ಲಿ ಕಂದಾಯ ಕ್ರಾಂತಿಯಾಗುತ್ತಿದೆ. ಸಾಮಾಜಿಕ ಭದ್ರತೆ ಪಿಂಚಣಿ, ಭೂದಾಖಲೆಗಳು, ಗ್ರಾಮ ಒನ್ ,ಪ್ರಮಾಣ ಪತ್ರಗಳು ಜನರ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನು ಡಬಲ್ ಇಂಜಿನ್ ಸರ್ಕಾರ ಮಾಡುತ್ತಿದೆ. ಮಧ್ಯವರ್ತಿಗಳ ಹಾವಳಿಯನ್ನು ನೀಗಿಸುವ ಡಿಜಿಟಲ್ ಕ್ರಾಂತಿಯನ್ನು ಸಾಕಾರಗೊಳಿಸಲಾಗಿದೆ ಎಂದರು.

ಎಸ್ ಸಿ ಎಸ್ ಟಿ ಸಮುದಾಯಗಳಿಗೆ ವಿವಿಧ ಸೌಲಭ್ಯ : ಎಸ್ ಸಿ ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಗಳ ಉಚಿತ ವಿದ್ಯುತ್, ಜಮೀನು ಖರೀದಿ ಹಾಗೂ ಮನೆ ನಿರ್ಮಾಣಕ್ಕೆ ಧನಸಹಾಯ, ರಾಜ್ಯದ ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ ಹಾಸ್ಟೆಲ್ ಗಳ ನಿರ್ಮಾಣ, 100 ಅಂಬೇಡ್ಕರ್ ಹಾಸ್ಟೆಲ್ ಗಳ ನಿರ್ಮಾಣ, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಲ್ಲಿ ಭರವಸೆಯ ಬೆಳಕನ್ನು ತುಂಬಲಾಗಿದೆ ಎಂದರು.

*ಎಲ್ಲರನ್ನೂ ಒಳಗೊಂಡಿರುವ ಅಭಿವೃದ್ಧಿ :*
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತಕ್ಕೆ ವಿಶ್ವಮಾನ್ಯತೆ ದೊರೆಯುತ್ತಿದೆ. ಭಾರತ ದೇಶದಲ್ಲಿ ಸಾಮಾಜಿಕ ನ್ಯಾಯ, ಸಾಮಾಜಿಕ ಭದ್ರತೆ ಒದಗಿಸಿ, ಎಲ್ಲರನ್ನೂ ಒಳಗೊಂಡಿರುವ ಅಭಿವೃದ್ಧಿಯಾಗುತ್ತಿದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗಗಳ ಶಿಕ್ಷಣ, ಉದ್ಯೋಗ, ಸಬಲೀಕರಣವನ್ನು ಸಾಧಿಸುವುದು ಸರ್ಕಾರದ ಬದ್ಧತೆಯಾಗಿದೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಪ್ರೋತ್ಸಾಹಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರೋತ್ಸಾಹಿಸಲಾಗುತ್ತಿದೆ ಎಂದರು.


[ays_poll id=3]