This is the title of the web page
This is the title of the web page
Local News

ಫೆ.11: ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


ರಾಯಚೂರು : ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಟಾನದ ವತಿಯಿಂದ ಫೆಬ್ರವರಿ 11 ರಂದು ಆರ್ಯ ಇಡಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಟಾನದ ಗೌರವ ಸಂಚಾಲಕ ಖಾಜನಗೌಡ ಹೇಳಿದರು.

ನಗರದ ಎಪಿಎಂಸಿನ ರೈತ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ರಾಯಚೂರು,ಬಳ್ಳಾರಿ,ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಅರ್ಯ ಈಡಿಗ ಸಮಾಜದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2022-23 ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಆದ್ದರಿಂದ 4 ಜಿಲ್ಲೆಗಳ ಎಲ್ಲಾ ತಾಲೂಕು ಹಾಗೂ ಗ್ರಾಮಗಳ ಈಡಿಗ ಸಮಾಜದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.


[ays_poll id=3]