![]() |
![]() |
![]() |
![]() |
![]() |
ರಾಯಚೂರು : ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಆಡಳಿತಕ್ಕೆ ಬೇಸತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಬಿಜೆಪಿ ಮುಖಂಡ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ಶರಣಗೌಡ ಸುಂಕೇಶ್ವರಹಾಳ ಹೇಳಿದರು.
ಕಳೆದ 15 ವರ್ಷಗಳಿಂದ ಕೆ. ಶಿವನಗೌಡ ನಾಯಕ್ ಅವರ ಪರವಾಗಿ ಹಾಗೂ ಪಕ್ಷದ ಪರವಾಗಿ ಯಾವುದೇ ಫಲಾಫೇಕ್ಷೆ ಇಲ್ಲದೆ ನಿಸ್ವಾರ್ಥದಿಂದ ಕಾರ್ಯನಿರ್ವಹಿಸಿದ್ದೇವೆ. ನಮ್ಮ ಗ್ರಾಮದ ರಾಮದುರ್ಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳನ್ನು ಅಭಿವೃದ್ಧಿಪಡಿಸಬೇಕೆಂದು ಸಾಕಷ್ಟು ಬಾರಿ ಶಾಸಕರ ಗಮನಕ್ಕೆ ತಂದರು ಕೂಡ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು.
ಇತ್ತೀಚಿನ ದಿನಗಳಲ್ಲಿ ಶಾಸಕ ಕೆ. ಶಿವನಗೌಡ ನಾಯಕ ಅವರು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಕೊಷ್ಟಕಗಳ ಮುಖಂಡರಾದ
ರಾಮಾನಂದ ದೇಸಾಯಿ, ಭೀಮನಗೌಡ ಜಿನ್ನಪೂರು, ಶಿವಕುಮಾರ್ ಸಾಹುಕಾರ ಸೇರಿದಂತೆ ಹಲವು ಜನ ಕಾರ್ಯಕರ್ತರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದರು.
![]() |
![]() |
![]() |
![]() |
![]() |
[ays_poll id=3]