ರಾಯಚೂರು : ಕರ್ನಾಟಕ ಭೋವಿ ಅಭಿವೃದ್ದಿ ನಿಗಮದಲ್ಲಿ ಶೈಕ್ಷಣಿಕ ಅಭಿವೃದ್ದಿಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಭೋವಿ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ವಾರ್ಷಿಕ ರೂ.1 ಲಕ್ಷಗಳ ಮಿತಿಯಲ್ಲಿ 5 ಲಕ್ಷಗಳ ವರಗೆ ಶೈಕ್ಷಣಿಕ ಸಾಲ ಸೌಲಭ್ಯವನ್ನು ಕಲ್ಪಿಸಬೇಕು.ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದಲ್ಲಿ ಭೋವಿ ಸಮುದಾಯದ ಜನರ ಮದುವೆ, ಸಭೆ ಸಮಾರಂಭ ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ರೂ. 30 ಲಕ್ಷಗಳ ವೆಚ್ಚದಲ್ಲಿ ಸಿದ್ದರಾಮೇಶ್ವರ ಸಮುದಾಯ ಭವನ ಮತ್ತು ರೂ.15ಲಕ್ಷಗಳ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಬೇಕು.
ಭೋವಿ ಸಮುದಾಯದ ಯುವಕ ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಹತ್ತು ತಿಂಗಳ ತೋಟಗಾರಿಕೆ ತರಬೇತಿ, ಗಣಕಯಂತ್ರ ಹಾಗೂ ಟೈಪಿಂಗ್ ತರಬೇತಿ, ಭಾರಿ ಲಘುವಾಹನ, ಜೆಸಿಬಿ, ಹಿಟಾಚಿ, ಚಾಲನಾ ತರಬೇತಿ,ದ್ವಿತೀಯ ತ್ರಿಚಕ್ರ ವಾಹನಗಳ ರಿಪೇರಿ, ಸರ್ವಿಸ್ ತರಬೇತಿ, ಪ್ಲಂಬರ್ ತರಬೇತಿಗಳನ್ನು ನೀಡಬೇಕು. ಭೋವಿ ಸಮುದಾಯದ ನಿರುದ್ಯೋಗಿಗಳಿಗೆ ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದಲ್ಲಿ ಫಾಂಚೈಸಿ ವ್ಯವಸ್ಥೆಯೊಂದಿಗೆ ವ್ಯಾಪಾರ ಅರಂಭಿಸಲು ಗರಿಷ್ಠ ರೂ.10 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಬೇಕು ಎಂದು ಒತ್ತಾಯಿಸಿದರು.
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಭೋವಿ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಭೋವಿ ಸಮುದಾಯದ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಬೇಕು. ಔದ್ಯಮಿಕ ಪೂರ್ವಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು. ಉದ್ಯೋಗ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸಬೇಕು ಎಂದು ಒತ್ತಾಯಿಸಿದರು.
![]() |
![]() |
![]() |
![]() |
![]() |
[ays_poll id=3]