ಭೀಕರ ಬಸ್ ಅಪಘಾತ : ಐದು ಜನ ಸಾವು..

K 2 Kannada News
ಭೀಕರ ಬಸ್ ಅಪಘಾತ : ಐದು ಜನ ಸಾವು..
WhatsApp Group Join Now
Telegram Group Join Now

K2Kannadanews.in

Accident News ಕರ್ನೂಲ : ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಬೈಕುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ನಾಲ್ಕು ಜನ ಮೃತಪಟ್ಟ ಘಟನೆ ಕರ್ನೂಲ್ ಬಳಿಯ ಪಾಂಡವಗಲ್ ಬಳಿ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ಘಟನೆ ನಡೆದಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್ ಎದುರಿಗೆ ಬರುತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಆದೋನಿ ಆಸ್ಪತ್ರೆಗೆ ದಾಖಲುಮಾಡಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತಪಟ್ಟವರಲ್ಲಿ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಾದ್ರಿ (55) ಪತ್ನಿ ನಾಗರತ್ನಮ್ಮ(48) ಮತ್ತು ಮಗ ದೇವರಾಜು (25) ಎಂದು ತಿಳಿದು ಬಂದಿದೆ. ಇನ್ನೊಂದು ಬೈಕ್ ನಲ್ಲಿದ್ದ ಆದೋನಿ ಮಂಡಲದ ಕುಪ್ಪಗಲು ಗ್ರಾಮದ ಪತಿ, ಪತ್ನಿ ಸ್ಥಳದಲ್ಲೆ ಮೃತಪಟ್ಟಿದ್ದು, ಪತಿ ಈರಣ್ಣ, ಪತ್ನಿ ಆದಿಲಕ್ಷ್ಮಿ ಎಂದು ತಿಳಿದು ಬಂದಿದರ. ಮಾಹಿತಿ ತಿಳಿದು ಸ್ಥಳಕ್ಕೆ ಆದೋನಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಆದೋನಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದೋನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

WhatsApp Group Join Now
Telegram Group Join Now
Share This Article