
K2 ಪೊಲಿಟಿಕಲ್ ನ್ಯೂಸ್ : ಸಾರ್ವಜನಿಕ ಹಣಲೂಟಿ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಆಂದ್ರ ಸಿಐಡಿ ಪೊಲೀಸರು ನಂದ್ಯಾಲದಲ್ಲಿ ಅವರನ್ನು ಮಧ್ಯರಾತ್ರಿ ಬಂಧನ ಮಾಡಿದ್ದಾರೆ ಅಂತ ತಿಳಿದು ಬಂದಿದೆ.
ಹೌದು, ಆಂಧ್ರ ಪ್ರದೇಶ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಈ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.
ನಂದ್ಯಾಲ ವ್ಯಾಪ್ತಿಯ ಡಿಐಜಿ ರಘುರಾಮಿ ರೆಡ್ಡಿ ನೇತೃತ್ವದ ಪೊಲೀಸರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಂದ್ರಬಾಬು ನಾಯ್ಡು ಅವರಿದ್ದ ನಿವಾಸಕ್ಕೆ ದಾಳಿ ಮಾಡಿ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆ ರಾತ್ರಿಯಲ್ಲೂ ಟಿಡಿಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನೂ ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.
![]() |
![]() |
![]() |
![]() |
![]() |
[ays_poll id=3]