ಶಿಕ್ಷಣ ಕ್ಷೇತ್ರಕ್ಕೆ ಪ್ರಮುಖ ಆಧ್ಯತೆ ನೀಡಿ ಪ್ರಗತಿ ಸಾಧಿಸಿ: ಜಿ.ಕುಮಾರ ನಾಯಕ
![]() |
![]() |
![]() |
![]() |
![]() |
ರಾಯಚೂರು : ಶಿಕ್ಷಣಕ್ಕೆ ಪ್ರಮುಖ ಆಧ್ಯತೆ ನೀಡಿ ಕಲಿಕಾ ಚೇತರಿಕೆ ಹಾಗೂ ನಲಿ ಕಲಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂದನ ಇಲಾಖೆ, ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕಾಗಿ ತೆರಳುತ್ತಿರುವುದು ಕಂಡು ಬರುತ್ತಿದ್ದು, ಶಾಲಾ ಅವಧಿಗೂ ಮುಂಚೆ ಹೊಲಗಳಲ್ಲಿ ಕೆಲಸ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದೆ ಬಾಲಕಾರ್ಮಿಕ ಪದ್ದತಿ ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಅಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಶಿಕ್ಷದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡೊದರು.
ಕಲಿಕಾ ಚೇತರಿಕೆ ಹಾಗೂ ನಲಿಕಲಿ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಹೆಚ್ಚಿಸಲು ಹೆಚ್ಚಿನ ಉತ್ತೇಜನ್ತ ನೀಡಬೇಕು. ಗ್ರಾಮೀಣ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಶಾಲೆಗಳಿಗೆ ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಹಾಗೂ ಕುಂದು ಕೊರತೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರಾಥಮಿಕ ಶಿಕ್ಷಣಕ್ಕೆ ಆಹಾರ ಬೆಂಬಲ, ಶಾಲಾ ಮಾತೆಯರ ನೇಮಕಾತಿ, ರಾಷ್ಟ್ರೀಯ ಮಾದ್ಯಮಿಕ ಶಿಕ್ಷಣ ಅಭಿಯಾನ, ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದರು.
ಆರೋಗ್ಯ ಇಲಾಖೆಯಲ್ಲಿ ಪ್ರಾಥÀಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದಲ್ಲಿ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಕಟ್ಟಡಗಳ ನಿರ್ವಹಣೆ ಸೇರಿದಂತೆ ಇನ್ನಿತರ ಯೋಜನೆಗಳಲ್ಲಿ ಉತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಾದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
![]() |
![]() |
![]() |
![]() |
![]() |