ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರಕಾರ ಬದ್ಧ: ಮುಖ್ಯಮಂತ್ರಿ
![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್ : ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನುಂಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ, ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆಗಳನ್ನು ಈ ಕ್ಷೇತ್ರ ಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರರಿ ಮನೆಗೆ ಗಂಗೆಯನ್ನು ಹೊರಿಸಲಾಗಿದೆ. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು.
ಗಡಿಭಾಗದ ಜಿಲ್ಲೆಗಳ1800 ಗ್ರಾಮ ಪಂಚಾಯತಿಗಳ ಸಂಪೂರ್ಣ ಅಭಿವೃದ್ಧಿ : ನಮ್ಮ ಸರಕಾರ ಸಮಗ್ರ ಕರ್ನಾಟಕದ ಚಿಂತನೆ ಮಾಡಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ನಡುಭಾಗದಿಂದ ಹಿಡಿದು ಗಡಿಭಾಗದವರೆಗೆ ಅಭಿವೃದ್ಧಿಯನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬೀದರ್ , ಕಲಬುರಗಿ, ಯಾದಗಿರಿ, ರಾಯಚೂರು ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳ ಗಡಿ ಭಾಗದ ಗ್ರಾಮಗಳಲ್ಲಿ 2 ನೂತನ ಕಾರ್ಯಕ್ರಮ ರೂಪಿಸಿದೆ. ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ, ತಮಿಳುನಾಡು, ಕೇರಳ ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಮ ಪಂಚಾಯತಿಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ಕಾರ್ಯಕ್ರಮ ಗಳನ್ನು ಈ ವರ್ಷದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ.
ಗಡಿ ಭಾಗದ ಸಮಗ್ರ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಗಡಿ ಭಾಗದ ಗ್ರಾಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೂಪಿಸಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಈ ವರ್ಷ ಗಡಿ ಭಾಗದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಿದೆ ಎಂದರು.
![]() |
![]() |
![]() |
![]() |
![]() |