This is the title of the web page
This is the title of the web page
State News

ರೈತರ ಕೃಷಿ ಸಾಲದ ಬಡ್ಡಿ ಮನ್ನಕ್ಕೆ ಸರ್ಕಾರ ಆದೇಶ..


K2kannadanews.in

Loan interest waiver : ರೈತರ (Farmer) ಸಾಲದ ಹೊರೆ ಇಳಿಸಲು ಸರಕಾರ (Government) ಮುಂದಾಗಿದೆ. ಮಧ್ಯಮಾವಧಿ (Medium) ಮತ್ತು ದೀರ್ಘಾವಧಿ (Long Agriculture lone) ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾ (interest waiver) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ರೈತರು ಕೇವಲ ತಮ್ಮ ಸಾಲದ ಮೊತ್ತ ಮಾತ್ರ ಕಟ್ಟಿ ಸಾಲಮುಕ್ತರಾಗಬಹುದಾಗಿದೆ.

ರಾಜ್ಯದ ಸಹಕಾರಿ ಸಂಸ್ಥೆಗಳ (Co-operative Societies) ಮೂಲಕ ಸಾಲ ಪಡೆದು 2023ರ ಡಿಸೆಂಬರ್‌ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ (Related) ಸಾಲಗಳ ಅಸಲು ಪಾವತಿಸಿದ್ದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ (CM) ಸಿದ್ದರಾಮಯ್ಯ (Siddaramayya) ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರಕಾರದ ಷರತ್ತುಗಳು ಇಲ್ಲಿವೆ..

*ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ.

*ನಿಗದಿತ ಸಹಕಾರ ಸಂಘಗಳಲ್ಲದೇ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಯೋಜನೆ ಅನ್ವಯಿಸದು.

*ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್, ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯ.

*ರಾಜ್ಯ ಸರ್ಕಾರದ ಬಡ್ಡಿ ರಿಯಾಯಿತಿ ಬದ್ಧತೆಯಡಿ ವಿತರಿಸಿರುವ ಕೃಷಿ/ ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅನ್ವಯ.

*ಮಾರಟೊರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಅನ್ವಯ.


[ays_poll id=3]