
ಸಿಂಧನೂರು : ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಹಾಸ್ಟೆಲ್ ಕೋಣೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾದ ಘಟನೆ ಪಿಡಬ್ಲ್ಯೂಡಿ ಕ್ಯಾಂಪ್ ಬಿ ಸಿ ಎಂ ವಸತಿ ನಿಲಯದಲ್ಲಿ ನಡೆದಿದೆ.
ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ ಬಳಿ ಇರುವಂತಹ ಬಿಸಿಎಂ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಗೌಡನಬಾವಿ ಗ್ರಾಮದ ಬಸವ ಕುಮಾರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಅನಿಕೇತನ ಕಾಲೇಜಿನಲ್ಲಿ ಬಿ.ಎ ಓದುತ್ತಿದ್ದು, ತಾನಿದ್ದ ಕೊಠಡಿಯಲ್ಲಿ ಇನ್ನು ಇಬ್ಬರು ವಿದ್ಯಾರ್ಥಿಗಳು ಇದ್ದರು. ಆದರೆ ಇಬ್ಬರು ವಿದ್ಯಾರ್ಥಿಗಳು ಊರಿಗೆ ಹೋಗಿದ್ದ ವೇಳೆ ಕೊಠಡಿಯಲ್ಲಿನ ಫ್ಯಾನಿಗಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಬಾನುವಾರ ಬೆಳಿಗ್ಗೆ 10.30 ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಗೊತ್ತಾಗುತ್ತಿದ್ದಂತೆ, ಇಲಾಖೆಯ ಅಧಿಕಾರಿಗಳು ವಿಷಯ ತಿಳಿದು ಪಾಲಕರಿಗೆ ಗಮನಕ್ಕೆ ತಂದಿದ್ದಾರೆ. ತಳಕ್ಕೆ ಸಿಂಧನೂರು ನಗರ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ಮಾಡಿ, ಮೃತ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಪ್ರವಾನಿಸಲಾಗಿದೆ. ಈ ಕುರಿತು ಮೃತ ಬಸವ ಕುಮಾರ್ ಜೀವನದಲ್ಲಿ ಇನ್ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]