K2kannadanews.in
Crime News ಲಿಂಗಸೂಗೂರು : 15 ತಿಂಗಳ ಹಿಂದಷ್ಟೇ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿದ್ದ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ರಾಜೀನಾಮೆ ಕೊಡಿಸಿದ ಹಿನ್ನೆಲೆಯಲ್ಲಿ ಮನನೊಂದು ನೇಣಿಗೆ ಶರಣಾದ ಘಟನೆ ಐದಬಾವಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಐದಬಾವಿ ಗ್ರಾಮದಲ್ಲಿ ಘಟನೆ ನಡೆದಿದ್ದು, ದೇವರಭೂಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ದ್ಯಾವಪ್ಪ ಪೂಜಾರಿ(60) ಆತ್ಮಹತ್ಯೆಗೆ ಶರಣಾಗಿದ್ದಾನೆ. 2 ವರ್ಷದ 6 ತಿಂಗಳ ಅಧಿಕಾರಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿದ್ದ ದ್ಯಾವಪ್ಪನಿಗೆ 15 ತಿಂಗಳಿಗೆ ಅಧ್ಯಕ್ಷ ಸ್ಥಾನಕ್ಕೆ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಕೊಡಿಸಿದಕ್ಕೆ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಕೆಲ ಮುಖಂಡರು ಮತ್ತೊಬ್ಬರ ಬಳಿ ಹಣ ಪಡೆದು ಗ್ರಾಮ ಪಂಚಾಯತಿ ಅಧ್ಯಕ್ಷ ಮಾಡಲು ಹೊರಟಿದ್ದರು, ಮುಖಂಡರ ಒತ್ತಡಕ್ಕೆ ಮಣಿದು ಜಮೀನಿನಲ್ಲಿ ನೇಣಿಗೆ ಕೊಎಳೊಡ್ಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಲಿಂಗಸೂಗೂರು ಪೊಲೀಸರು, ಸ್ಥಳದಲ್ಲಿ ತನಿಖೆ ನಡೆಸಿದ್ದಾರೆ. ಘಟನೆಯು ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.