This is the title of the web page
This is the title of the web page
Local News

ನಾಗೋಲಿ ಗ್ರಾಮದಲ್ಲಿ ವಿಶೇಷ ಮಕ್ಕಳ ಗ್ರಾಮ ಸಭೆ


ಅರಕೇರಾ : ಮಕ್ಕಳ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಗ್ರಾ.ಪಂ ಸಹಭಾಗಿತ್ವ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಡಿಒ ನಾಗೇಂದ್ರಪ್ಪ ಹೇಳಿದರು. ಸಮೀಪದ ಮಲ್ಲೆದೇವರಗುಡ್ಡ ಗ್ರಾ.ಪಂ ವ್ಯಾಪ್ತಿಯ ನಾಗೋಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಡಾನ್ ಬಾಸ್ಕೋ ಸಮಾಜ ಸೇವಾ ಸಂಸ್ಥೆ ಹಾಗೂ ಶೃತಿ ಸಂಸ್ಕೃತಿ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವಿಶೇಷ ಮಕ್ಕಳ ಗ್ರಾಮ ಸಭೆಯಲ್ಲಿ ಮಾತನಾಡಿದರು.

ಹೊಸ ವರ್ಷಾಚರಣೆ ವೇಳೆ ಕೋವಿಡ್ 4ನೇ ಅಲೆ ಬಗ್ಗೆ ಗಮನವಿರಲಿ..

ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಲು ಗ್ರಾ.ಪಂ ಬದ್ಧವಾಗಿದೆ. ಅಗತ್ಯ ಸೌಲಭ್ಯಗಳನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯವಿರುವ 12 ಸರ್ಕಾರಿ ಶಾಲೆಗಳಿಗೆ ಗ್ರಾ.ಪಂ.ನಿಂದ 6/ ಡೆಸ್ಕ್‌ಗಳನ್ನು ವಿತರಿಸಲಾಗಿದೆ ಎಂದರು.
ಅಮೃತ ಗ್ರಾ.ಪಂ ಯೋಜನೆ ಅಡಿಯಲ್ಲಿ ಮಲ್ಲೆದೇವರಗುಡ್ಡ ಗ್ರಾ.ಪಂ ಆಯ್ಕೆಯಾಗಿದ್ದು, ಅದರ ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲು ಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಮಕ್ಕಳ ಹಕ್ಕುಗಳ ಜಿಲ್ಲಾ ಸಂಯೋಜಕ ಸಿದ್ದಲಿಂಗಪ್ಪ ಕಾಕರಗಲ್ ಮಾತನಾಡಿ, ದೇಶದ ಒಳಿತಿಗಾಗಿ ಮತ್ತು ಅಭಿವೃದ್ಧಿಗಾಗಿ ಮಕ್ಕಳನ್ನು ರಕ್ಷಿಸುವುದು ಹಾಗೂ ಅವರ ಅವಶ್ಯಕತೆಗಳನ್ನು ಪೂರೈಸಿ ಅಭಿವೃದ್ಧಿಗೊಳಿಸುವುದು ಪ್ರತಿಯೊಬ್ಬರ ನಾಗರಿಕರ ಮತ್ತು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಹಾಗೂ ಪ್ರೋತ್ಸಾಹ ನೀಡಿದರೆ ಶೈಕ್ಷಣಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದರು.


[ays_poll id=3]