This is the title of the web page
This is the title of the web page
Education News

ಗುಲಬರ್ಗಾ ವಿ.ವಿ. ಪದವಿ ಪರೀಕ್ಷೆ ಮುಂದೂಡಿಕೆ


K2 ನ್ಯೂಸ್ ಡೆಸ್ಕ್ : ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಲೇಜಿನ ಸಿಬ್ಬಂದಿಗಳನ್ನು ನಿಯೋಜಿಸಿರುವ ಕಾರಣ ಇದೇ ಏಪ್ರಿಲ್ 20 ರಿಂದ ಪ್ರಾರಂಭವಾಗಬೇಕಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಕೋರ್ಸಿನ ಎಲ್ಲಾ ಪರೀಕ್ಷೆಗಳನ್ನು ಏಪ್ರಿಲ್ 27ಕ್ಕೆ ಮುಂದೂಡಲಾಗಿದೆ.

ಹೌದು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸೇರಿದಂತೆ ಎಲ್ಲಾ ಸಿಬ್ಬಂದಿಗಳನ್ನು ಚುನಾವಣಾ ಕೆಲಸಕ್ಕಾಗಿ ನೇಮಿಸಿರುವ ಹಿನ್ನೆಲೆಯಲ್ಲಿ, ಭಾಗಶಹ ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ನಂತರ ತಿಳಿಸಲಾಗುವುದು. ಈ ಬದಲಾವಣೆಯನ್ನು ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಗಮನಿಸಬೇಕು ಎಂದು ವಿ.ವಿ.ಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


[ays_poll id=3]