K2kannadanews.in
Local News ಸಿಂಧನೂರು : ಜಿಲ್ಲೆಯಾದ್ಯಂತ ಕಳೆದ 15 ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಸಾಕಷ್ಟು ಬೆಳೆ ಹಾನಿಯಾಗಿದೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲೂ ಕೂಡ ಅತಿವೃಷ್ಟಿಯಿಂದ ಹತ್ತಿ ಬೆಳೆ ಹಾನಿಗೊಳಗಾಗಿದ್ದು, ಇಂದು ಶಾಸಕ ಹಂಪನಗೌಡ ಬಾದರ್ಲಿ ಅವರು, ಜಮೀನುಗಳಿಗೆ ಭೇಟಿ ವೀಕ್ಷಣೆ ನಡೆದರು.
ತಾಲೂಕಿನ ಯಾಪಲಪರ್ವಿ, ವಲ್ಕಂದಿನಿ, ರಾಗಲಪರ್ವಿ,ಪುಲ್ಲದಿನ್ನಿ, ದುಮತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಹತ್ತಿ ಬೆಳೆಗಳಿಗೆ ಭಾರೀ ಹಾನಿ ಸಂಭವಿಸಿದೆ. ಹಾನಿಗೊಳಗಾದ ಜಮೀನುಗಳಿಗೆ ಶಾಕರು ಭೇಟಿ ನೀಡಿ ಬೆಳೆ ನಾಶದ ಬಗ್ಗೆ ತಹಸಿಲ್ದಾರ್ ಅರುಣ್ ದೇಸಾಯಿ ಅವರಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ರೈತರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. ನಾನು ಸದಾ ನಿಮ್ಮೊಂದಿಗಿದ್ದೇನೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮತ್ತು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.