This is the title of the web page
This is the title of the web page
Politics News

HDK ಹತಾಶೆ ಕೂಪದಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ : DGR


K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದ ಹೆಚ್ ಡಿ ಕುಮಾರಸ್ವಾಮಿ ಅವರ ನೆಮ್ಮದಿ ಕಳೆದುಹೋಗಿ  ವಿಲ ವಿಲ ಒದ್ದಾಡುತ್ತಿದ್ದಾರೆ. ಹತಾಶೆಯಲ್ಲಿ ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ, ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾಮಾಜಿಕ ಜಾಲತಾಣದ ಮೂಲಕ ಟೀಕೆ ಮಾಡಿದ್ದಾರೆ.

ಕುಮಾರಸ್ವಾಮಿಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಅವರ ಕೈ ನಾವ್ಯಾರು ಕಟ್ಟಿ ಹಾಕಿಲ್ಲ. ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಅವರ ಕನಸನ್ನು ನುಚ್ಚುನೂರು ಮಾಡಿದರು. ಆದ್ದರಿಂದ ಕನಸು ಭಗ್ನಗೊಂಡ ಕುಮಾರಸ್ವಾಮಿ ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.


[ays_poll id=3]