K2kannadanews.in
Dangerous video ಯಾದಗಿರಿ : ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಅಲ್ಲಲ್ಲಿ ಗಾಳಿ ಸಮೇತ ಮಳೆಯಾಗುತ್ತಿದ್ದು, ಮಳೆಯ ನೀರಿನಿಂದ ಅವಾಂತರಗಳೂ ಸಂಭವಿಸುತ್ತಿವೆ. ಮಳೆಯ ನಡುವೆ ಬೀಸಿದ ಭಾರೀ ಗಾಳಿಗೆ ಊರಿಗೆ ಊರೇ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಅಲ್ಲೋಲ ಕಲ್ಲೋಲ ಸೇಷ್ಟಿಸಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಹಲವು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟಿವಿ, ಫ್ರಿಡ್ಜ್, ಫ್ಯಾನ್ ಗಳು ಹಾನಿಯಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಜನರು ಮನೆಗಳಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ.