
ರಾಯಚೂರು : ರಾಯಚೂರು ವಿಶ್ವವಿದ್ಯಾಲಯ ವಸತಿ ನಿಲಯ ವಿದ್ಯಾರ್ಥಿಗಳು ಸಮಸ್ಯೆಯನ್ನು ನಿವಾರಣೆ ಮಾಡುವಂತೆ ಒತ್ತಾಯಿಸಿ ವಿಶ್ವವಿದ್ಯಾಲಯ ಮುಖ್ಯ ದ್ವಾರದ ಬಳಿ ಪ್ರತಿಭಟನೆ ಮಾಡಿದ ಘಟನೆ ಜರುಗಿದೆ.
ರಾಯಚೂರು ತಾಲೂಕಿನ ಯರಗೇರ ಗ್ರಾಮದ ಬಳಿ ಇರುವಂತಹ ರಾಯಚೂರು ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಒಂದು ವಸತಿ ನಿಲಯದಲ್ಲಿ ಪೌಷ್ಟಿಕ ಆಹಾರ ನೀಡುತ್ತಿಲ್ಲ. ನೀರಿನ ಕೊರತೆ ಎದ್ದು ಕಾಡುತ್ತಿದೆ. ಯಾವುದೇ ರೀತಿಯಾದ ಸೌಲಭ್ಯಗಳು ಸರಿಯಾಗಿ ನೀಡುತ್ತಿಲ್ಲ. ಸ್ವಚ್ಛತೆಯ ಕೊರತೆ ಸಮಯಕ್ಕೆ ಸರಿಯಾಗಿ ನಿಲಯ ಪಾಲಕರು ಬರುತ್ತಿಲ್ಲ. ವಿದ್ಯಾರ್ಥಿಗಳ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ ಮತ್ತು ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಪೀಡಿತರಾದರೆ ಪ್ರಥಮ ಚಿಕಿತ್ಸೆ ನೀಡಲು ಯಾವುದೇ ಸೌಲಭ್ಯಗಳು ಇಲ್ಲ. ಈ ಎಲ್ಲಾ ಸಮಸ್ಯೆಗಳ ಕುರಿತಾಗಿ ಈಗಾಗಲೇ ಮೇಲ್ವಿಚಾರಕರಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಕ್ರಮ ಕೈಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.
ವಿಶ್ವವಿದ್ಯಾಲಯದ ಮುಖ್ಯದ್ವಾರದ ಮುಂದೆ ಹೆದ್ದಾರಿ ಇರುವ ಹಿನ್ನೆಲೆಯಲ್ಲ, ವಿದ್ಯಾರ್ಥಿಗಳು ಪ್ರತಿಭಟನೆ ಕೋರುತ್ತಿದ್ದಂತೆ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂರು ದಿನಗಳಲ್ಲಿ ಸಮಸ್ಯೆ ಇತ್ಯರ್ಥ ಮಾಡುವಂತೆ ನಿಮ್ಮ ಅಧಿಕಾರಿಗಳಿಗೆ ಸೂಚಿಸುತ್ತೇವೆ, ಎಂಬುವ ನಿಟ್ಟಿನಲ್ಲಿ ಮನವೊಲಿಸಿ ಪ್ರತಿಭಟನೆ ಕೈ ಬಿಡುವಂತೆ ಸಂತೈಸಿದರು. ಈ ವೇಳೆ ವಿದ್ಯಾರ್ಥಿಗಳು ಐದು ದಿನದ ಗಡುವು ನೀಡಿ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
![]() |
![]() |
![]() |
![]() |
![]() |
[ays_poll id=3]