
ರಾಯಚೂರು : ಜನರಿಂದ ಆರಿಸಲ್ಪಟ್ಟ ಜನಪ್ರತಿನಿಧಿ ಅಲ್ಲದಿದ್ದರೂ ಬೋಸರಾಜ್ ಅವರಿಗೆ ಹೇಗೆ ಸಚಿವ ಕೊಡಲು ಹೇಗೆ ಸಾಧ್ಯ ಎಂಬ ಬಗ್ಗೆ ಕಾಂಗ್ರೆಸ್ ಮುಖಂಡರನ್ನು ಒಳಗೊಂಡಂತೆ ಹಲವು ನಾಯಕರು ಅಸಮಾಧಾನವನ್ನು ವ್ಯಕ್ತಪಡಿಸಿ ವಿರೋಧಿಸಿದರು. ವಿರೋಧದ ಮಧ್ಯೆಯು ಸಚಿವ ಸ್ಥಾನ ನೀಡಲು ಇದೇ ಪ್ರಮುಖ ಕಾರಣವಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತದಿಂದ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಿಕೊಂಡಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ಹೈಕಮಾಂಡ್ನಿಂದಲೇ ಬೋಸರಾಜ್ ಅವರಿಗೆ ಮಂತ್ರಿಭಾಗ್ಯ ಒಲಿದುಬಂದಿದೆ ಅಂತ ತಿಳಿದು ಬಂದಿದೆ. ರಾಯಚೂರು ನಗರ ಕ್ಷೇತ್ರದ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ನಿರ್ಧಾರವಾಗಿತ್ತು. ಆದ್ರೆ, ಬೋಸರಾಜ್ ರಾಯಚೂರು ನಗರ ಕ್ಷೇತ್ರದ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದರು.
ರಾಯಚೂರು ನಗರ ಕ್ಷೇತ್ರದ ಟಿಕೆಟ್ ತಮಗೆ ಕೊಡಬೇಕು. ಇಲ್ಲ ತಮ್ಮ ಪುತ್ರ ರವಿ ಬೋಸರಾಜ್‌ಗೆ ಕೊಡಬೇಕು ಅಂತ ಪಟ್ಟು ಹಿಡಿದಿದ್ರು. ರಾಜ್ಯ ಮುಖಂಡರು ಮನವೊಲಿಸುವ ಕಸರತ್ತು ಮಾಡಿದರು ಈ ಒಂದು ಪಟ್ಟು ಬಿಟ್ಟರಲಿಲ್ಲ. ಕೊನೆಗೆ ಹೈಕಮಾಂಡ್ ಮಧ್ಯಸ್ಥಿಕೆವಹಿಸಿ, ಖುದ್ದು ರಾಹುಲ್ ಗಾಂಧಿ ಮಾತುಕತೆ ನಡೆಸಿದ್ರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎಂಎಲ್ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಬೋಸರಾಜ್‌ಗೆ ಅಚ್ಚರಿ ರೀತಿಯಲ್ಲಿ ಮಂತ್ರಿ ಸ್ಥಾನ ಒಲಿದು ಬಂದಿದೆ.
![]() |
![]() |
![]() |
![]() |
![]() |
[ays_poll id=3]