![]() |
![]() |
![]() |
![]() |
![]() |
ಮಸ್ಕಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಸಚಿವ ಸಂಪುಟ ಸೇರಲು ನಾನು ಆಕಾಂಕ್ಷೆಯಾಗಿದ್ದೇನೆ. ಪಕ್ಷದ ವರಿಷ್ಠರು ಈಗಾಗಲೇ ನನ್ನನ್ನು ಗುರುತಿಸಿದ್ದು. ಸಚಿವ ಸ್ಥಾನ ನೀಡಿದರೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಶಾಸಕ ಬಸನಗೌಡ ತುರ್ವಿಹಾಳ ತಿಳಿಸಿದರು.
ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ಸಚಿವ ಸ್ಥಾನ ನೀಡಿದರೆ ರಾಜ್ಯದ ಅಭಿವೃದ್ಧಿ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಯತ್ನ ಮಾಡುತ್ತೇನೆ ಎಂದರು. ಮಸ್ಕಿ ತಾಲ್ಲೂಕಿನಲ್ಲಿ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಬೇಕಾಗಿದ್ದು ಬರುವ ದಿನಗಳಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಧಿವೇಶನ ನಡೆಯುತ್ತಿದ್ದು ಮುಗಿದ ನಂತರ ಕ್ಷೇತ್ರಕ್ಕೆ ಆಗಮಿಸಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಭಿವೃದ್ಧಿ ಕೆಲಸಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
![]() |
![]() |
![]() |
![]() |
![]() |
[ays_poll id=3]