K2Kannadanews.in
Crime news ಪಾಮನಕಲ್ಲೂರು : ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಪಿಡಿಒ ಮತ್ತು ತಾಲೂಕು ಅಧಿಕಾರಿಗಳಿಗೆ ಅದೆಷ್ಟೋಬಾರಿ ಮನವಿ ಮಾಡಿದರು ಪ್ರತಿಕ್ರಿಯೆ ಸದಾ ಅಧಿಕಾರಿಗಳಿಗೆ ಇಂದು ಕೇಂದ್ರ ತಂಡದ ಅಧಿಕಾರಿಗಳ ಮುಂದೆ ಗ್ರಾಮಸ್ಥರು ಅಲ್ಲೇ ಮಾಡಿದ ಘಟನೆ ಬೆಂಚಮರಡಿ ಗ್ರಾಮದಲ್ಲಿ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬೆಂಚಮರಡಿ ಗ್ರಾಮದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನರೇಗಾ ಕಾಮಗಾರಿ ಸ್ಥಳದಲ್ಲಿ ನೆರಳಿನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಮಹಿಳೆಯರು, ಹಿರಿಯರು ಸುಡು ಬಿಸಿಲಿಗೆ ಬಳಲಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿಕೊಂಡರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಜಿಲ್ಲೆಯಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಮೂವರ ಸದಸ್ಯರ ತಂಡವೊಂದನ್ನು ಕಳಿಸಿ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಗ್ರಾಮಕ್ಕೆ ಭೇಟಿಕೊಡುತ್ತಲೇ ಗ್ರಾಮಸ್ಥರು ಅಧಿಕಾರಿಗಳನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಸಾರ್ವಜನಿಕರು ಮತ್ತು ಪಿ ಡಿ ಓ ನಡುವೆ ಮಾತಿನ ಚಿಕ್ಕಮಕಿ ನಡೆದಾಗ ಗ್ರಾಮಸ್ಥರು ಅಸಮಾಧಾನ ಗೊಂಡು ಪಿಡಿಒ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆದೊಯ್ದರು. ಜನರ ಆಕ್ರೋಶ ಹಾಗೂ ಪರಿಸ್ಥಿತಿ ಕೈಮೀರಿ ಹೋಗುವುದನ್ನು ಅರಿತು ಅಧಿಕಾರಿಗಳು ಗ್ರಾಮದಿಂದ ಹೊರಟು ಹೋದರು.