This is the title of the web page
This is the title of the web page
Local News

ಸದಾಶಿವ ಆಯೋಗ ಜಾರಿ ಮಾಡಿ, ಇಲ್ಲ ಬಿಜೆಪಿಯನ್ನು ಸೋಲಿಸುತ್ತೇವೆ


ರಾಯಚೂರು : ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಬಿಜೆಪಿ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿ ಹೋರಾಟ ಮಾಡಿದರು, ಈ ಬಗ್ಗೆ ಗಮನಹರಿಸುತ್ತಿಲ್ಲ. ಇದೇ ರೀತಿ ನಿಷ್ಕಾಳಜಿ ಮುಂದುವರಿಸಿದರೆ ಬಿಜೆಪಿ ಪಕ್ಷವನ್ನ ಸೋಲಿಸಬೇಕಾಗುತ್ತದೆ ಎಂದು ಸಚಿವರಿಗೆ ಎಚ್ಚರಿಕೆ ನೀಡಿದ MRHS ರಾಜ್ಯ ಅಧ್ಯಕ್ಷ ನರಸಪ್ಪ ದಂಡೋರ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರಿಗೆ ಆಗಮಿಸಿದ ಸಚಿವರಿಗೆ ಇಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು ಪ್ರತಿಭಟನೆ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಚಿವರೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷ ನರಸಪ್ಪ ದಂಡೂರ ಬಿಜೆಪಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಹೋರಾಟ ಮಾಡಿದ ಸಂದರ್ಭದಲ್ಲಿ, ಎಂಟು ಜನ ಶಾಸಕ, ಸಚಿವರು ಹೋರಾಟ ಸ್ಥಳಕ್ಕೆ ಆಗಮಿಸಿ ಸದಾಶಿವ ಆಯೋಗ ವರದಿ ಶಿಫಾರಸು ಮಾಡಲಾಗುತ್ತದೆ ಎಂದು ಮಾತು ಕೊಟ್ಟು, ಮಾತು ತಪ್ಪಿದ್ದಾರೆ.

ಇರುವ ಮೂರು ತಿಂಗಳಲ್ಲಿ ಈ ಒಂದು ವರದಿ ಕೇಂದ್ರಕ್ಕೆ ಶಿಫಾರಸು ಮಾಡದೆ ಹೋದರೆ, ಮುಂದಿನ ಚುನಾವಣೆಯಲ್ಲಿ ಈ ಒಂದು ಸರ್ಕಾರವನ್ನ ಸೋಲಿಸಬೇಕಾಗುತ್ತದೆ ಎಂದು ಸಚಿವರಿಗೆ ಎಚ್ಚರಿಕೆಯನ್ನು ನೀಡಿದರು. ಈ ವೇಳೆ ಸಚಿವರು ಕೂಡಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವ ಬಗ್ಗೆ ಶಿಫಾರಸ್ಸು ಮಾಡುತ್ತೇನೆ ಎಂದು ಭರವಸೆ ನೀಡಿದರು.


[ays_poll id=3]