ಕಾಂಗ್ರೆಸ್ ಟಿಕೆಟ್ ಕುರಿತು ಮಹತ್ವದ ಸಭೆ
![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಚಿತ್ತ ಇಂದು ಬೆಂಗಳೂರಿನ ಕೇಂದ್ರ ಕಚೇರಿಯತ್ತ ನೆಟ್ಟಿದೆ. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ಟಿಕೆಟ್ ಹಂಚಿಕೆ ಸಭೆ ಇಂದು ನಡೆಯಲಿದೆ.
ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಕುರಿತು ಇಂದು ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಮಿತಿಯ ಮೊದಲ ಸಭೆ ಕರೆದಿದೆ. ಈಗಾಗಲೇ ಪ್ರತಿ ಜಿಲ್ಲೆಯಿಂದ ತಲಾ ಮೂವರು ಆಕಾಂಕ್ಷಿಗಳ ಪಟ್ಟಿಯನ್ನು ಗುಪ್ತವಾಗಿ ಕೆಪಿಸಿಸಿ ಅಧ್ಯಕ್ಷರಿಗೆ ತಲುಪಿಸಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕೃತ ಮಾಡಿ, ಅರ್ಹರ ಹೆಸರನ್ನು ಮಾತ್ರ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿಗೆ ಕಳುಹಿಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಿದ್ದಾರೆ ವರಿಷ್ಠರು.
![]() |
![]() |
![]() |
![]() |
![]() |