K2kannadanews.in
Crime News ಬೆಂಗಳೂರು : ಹೆಂಡತಿ ಶೀಲ ಶಂಕಿಸಿ ಪ್ರತಿಯೊಬ್ಬ, ಹೆಂಡತಿಗೆ ಬೆಂಕಿ ಹಚ್ಚಿ ಕೊಂದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ಹೌದು ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, 2 ವರ್ಷಗಳ ಹಿಂದೆ ಮದುವೆಯಾಗಿದ್ದ ಪ್ರಭು, ಪ್ರಿಯಾಂಕಾ ಮೇಲೆ ಅನುಮಾನಪಡುತ್ತಿದ್ದ, ಇದೇ ಕಾರಣಕ್ಕೆ ಪದೇ ಪದೇ ಜಗಳ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಕುಡಿಸು ಬಂದು ಅದೇ ಮತ್ತಿನಲ್ಲಿ ಪೆಟ್ರೋಲ್ ತಂದ ಪ್ರಭು ಪತ್ನಿ ಪ್ರಿಯಾಂಕ್ ಮೇಲೆ ಸುರಿದು ತಾನೂ ಸುರಿದುಕೊಂಡಿದ್ದಾನೆ. ನಂತರ ಬೆಂಕಿಬಹಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ.
ಕೊತ್ತನೂರು ಭಾಗದ ಮಾರಮ್ಮ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.