This is the title of the web page
This is the title of the web page
Local News

ಜ.25 ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ


ರಾಯಚೂರು : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜ.25 ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ಬಿ. ನರಸಪ್ಪ ದಂಡೋರ ಹೇಳಿದರು.

ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಮಾಡಿದ ಹೋರಾಟದ ಫಲವಾಗಿ ಸಿದ್ಧಗೊಂಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನದ ವಿಚಾರದಲ್ಲಿ ಬಿಜೆಪಿ ಸರಕಾರ ಕೊಟ್ಟ ಮಾತು ಹುಸಿಯಾಗುತ್ತಿದ್ದು, ವಿಳಂಬ ಧೋರಣೆ ಅನುಸರಿಸುವ ಮೂಲಕ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿದರು .

ಈಗ ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರು ಆದೇಶದ ಮೇರೆಗೆ ಈಗ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಹೋರಾಟವನ್ನು ಮುಂದುವರೆಸಲಾಗುವುದೆಂದು ಹೇಳಿದರು. ಈಗ ಒಳಮೀಸಲಾತಿ ಜಾರಿಗಾಗಿ ನಾವು ಜಿಲ್ಲಾಧಿಕಾರಿಗಳ ಕಚೇರಿ, ಸಂಸದರ ಕಚೇರಿ, ಬಿಜೆಪಿ ಕಚೇರಿಗಳಿಗೂ ಮುತ್ತಿಗೆ ಹಾಕುವುದರ ಮೂಲಕ ಹೋರಾಟವನ್ನು ತೀವ್ರಗೊಳಿಸಲು ಚಿಂತನೆ ನಡೆದಿದೆ ಎಂದರು.


[ays_poll id=3]