
K2 ಸ್ಪೋರ್ಟ್ಸ್ ನ್ಯೂಸ್ : ಭಾರತ ತಂಡವು ಶ್ರೀಲಂಕಾ ವಿರುದ್ಧ 317 ರನ್‌ಗಳಿಂದ ವಿಶ್ವ ದಾಖಲೆಯ ಗೆಲುವು ಸಾಧಿಸಿದೆ. ಈ ಹಿಂದೆ 2008ರ ಜುಲೈ 1ರಂದು ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾ ವಿರುದ್ಧ 258 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇದು ಅತ್ಯಂತ ದೊಡ್ಡ ಅಂತರದ ರನ್‌ಗಳ ಗೆಲುವು ಆಗಿತ್ತು.
ವಿರಾಟ್ ಕೊಹ್ಲಿ, ಶುಭನ್ ಗಿಲ್ ಸ್ಫೋಟಕ ಬ್ಯಾಟಿಂಗ್ ಹಾಗೂ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಉತ್ತಮ ಬೌಲಿಂಗ್ ಪ್ರದರ್ಶನದಿಂದ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದೆ. ಇನ್ನು ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತವು 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡವು 22 ಓವರ್‌ಗಳಲ್ಲಿ 9 ವಿಕೆಟ್ ನಷ್ಟ ಹಾಗೂ ಓರ್ವ ಆಟಗಾರರ ಇಂಜ್ಯೂರಿಯಿಂದಾಗಿ 73 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
![]() |
![]() |
![]() |
![]() |
![]() |
[ays_poll id=3]