
ರಾಯಚೂರು : ರೈತರ ಹಲವು ಸಮಸ್ಯೆಗಳ ಕುರಿತು ರೈತ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಎಲ್ಲ ಚಂದ್ರಶೇಖರ್ ನಾಯಕ್ ತೀವ್ರ ತರಾಟೆಗೆ ತೆಗೆದುಕೊಂಡರು.
ಇತ್ತೀಚೆಗೆ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿಯಲ್ಲಿ ತುಂಗಭದ್ರಾ ಜಲಾಯಶಯದಿಂದ ಕಾಲುವೆಗಳಿಗೆ ನಿರು ಹರಿಸಲು ನಿರ್ಧರಿಸಲಾಗಿತ್ತು ಆದರೆ ತುಂಗಭದ್ರಾ ಎಡದಂಡೆ ಕಾಲುವೆಯಿಂದ 47 ಮೈಲ್ ನಲ್ಲಿ ಹಾಗೂ ಉಳಿದ ಕೆಳಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಸಭೆಯಲ್ಲಿ ನೀರಾವರಿ ಇಲಾಖೆ ಅಧಿಕಾರಿ ಬೀಜವಾರಿಯ ಉತ್ತರ ನೀಡಿದರು.
ಅಧಿಕಾರಿಯ ಉತ್ತರದಿಂದ ಅಸಮಾಧಾನ ಗೊಂಡ ಜಿಲ್ಲಾಧಿಕಾರಿಗಳು ಅಧಿಕಾರಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡು ಕೇಳಿದ ಪ್ರಶ್ನೆಗೆ ಉತ್ತರ ಕೊಡುವುದು ಕಲಿಯಿರಿ ಕೇವಲ ತಲೆ ಅಲ್ಲಾಡಿಸುವುದು ಅಸಮಾಧಾನ ವ್ಯಕ್ತಪಡಿಸಿದರು. ಇನ್ನೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆಳಭಾಗದ ರೈತರಿಗೆ ನೀರು ಪೂರೈಕೆ ಮಾಡಬೇಕು ಸೂಚನೆ ನೀಡಿದರು.
![]() |
![]() |
![]() |
![]() |
![]() |
[ays_poll id=3]