
K2 ನ್ಯೂಸ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ರಾಜಕೀಯ ಹುದ್ದೆಗಳಿಗೆ ನ್ಯಾಯಾಧೀಶರನ್ನು ನೇಮಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಹೇಳಿದ್ದಾರೆ.
ಹೌದು ನಿವೃತ್ತ ನ್ಯಾಯಮೂರ್ತಿ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದು ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಕಡಿಮೆ ಮಾಡಿದೆ. ನ್ಯಾಯಾಧೀಶರಿಗೆ ಸರ್ಕಾರಿ ಹುದ್ದೆಗಳನ್ನು ನೀಡುವುದು ದುರದೃಷ್ಟಕರ. ಸರ್ಕಾರ ಶೇ.50ರಷ್ಟು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರನ್ನು ರಾಜಕೀಯ ಹುದ್ದೆಗಳಿಗೆ ನೇಮಿಸುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ. ಇದು ನ್ಯಾಯಾಂಗದ ಮೇಲೆಯೇ ಅನುಮಾನ ಮೂಡಿಸುತ್ತಿದೆ ಎಂದು ಅಲ್ವಿ ಹೇಳಿದರು.
![]() |
![]() |
![]() |
![]() |
![]() |
[ays_poll id=3]