ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ : ಡಿಕೆಶಿ
![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷ ಆರಂಭಿಸಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ಪಕ್ಷದಲ್ಲಿ ಏನು ಉಳಿದಿಲ್ಲ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಜೆಡಿಎಸ್‌ಗೆ ಭವಿಷ್ಯವಿಲ್ಲ. ಹಾಗಾಗಿ ಕೆಲ ದಳ ನಾಯಕರು ಕಾಂಗ್ರೆಸ್ ಸೇರಿದ್ದಾರೆಂದು ಡಿ.ಕೆ.ಶಿವಕುಮಾ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿ, ಹಸ್ತಕ್ಕೆ ಮತ ಹಾಕಿ, ನಾವು ಎಲ್ಲರಿಗೂ ಅಧಿಕಾರ ನೀಡುತ್ತೇವೆ. ನುಡಿದಂತೆ ನಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ. ಬಿಜೆಪಿಯವರು ಪ್ರತೀ ನೇಮಕಾತಿಗೂ ಲಂಚ ಫಿಕ್ಸ್ ಮಾಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಸತ್ಯ ಹೇಳಿದ್ದಕ್ಕೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆಂದು ಕಿಡಿಕಾರಿದರು.
![]() |
![]() |
![]() |
![]() |
![]() |