
K2 ಪೊಲಿಟಿಕಲ್ ಡೆಸ್ಕ್ : ಹೊಸ ಪಕ್ಷ ಸ್ಥಾಪನೆ ಮಾಡುವುದರೊಂದಿಗೆ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ ಜನಾರ್ಧನ್ ರೆಡ್ಡಿ ಅವರ ನಡೆಗಳು ದಿನೇ ದಿನೇ ಬಿಜೆಪಿಗೆ ಶಾಕ್ ನೀಡುತ್ತಾ ಸಾಗಿದೆ. ಇದೀಗ ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತೆ ಶಾಕ್ ನೀಡಿದ್ದಾರೆ.
ಇನ್ನು ಜನವರಿ 6ರಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ತಮ್ಮ ನೂತನ ಪಕ್ಷದ ಲೋಗೋ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಈ ವೇಳೆಗಾಗಲೇ ಈ ಭಾಗದಲ್ಲಿ ಪಕ್ಷವನ್ನ ಸದೃಢವಾಗಿ ಮಾಡಲು, ಪ್ರತಿನಿತ್ಯ ಒಂದೊಂದು ಕ್ಷೇತ್ರಗಳಲ್ಲಿ ಓಡಾಟ ನಡೆಸುವ ಮೂಲಕ, ಎಲ್ಲಾ ಪಕ್ಷಗಳಿಗೂ ಅದರಲ್ಲೂ ಹೆಚ್ಚಾಗಿ ಬಿಜೆಪಿ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. KRPP ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ, ಬಿಜೆಪಿಗೆ ಮತ್ತೊಂದು ಶಾಕ್ ಕೊಡಲು ಸಜ್ಜಾಗಿದ್ದಾರೆ.
ಕುಷ್ಟಗಿ ಕ್ಷೇತ್ರದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು ಅವರನ್ನು ತಮ್ಮ ಪಕ್ಷದಿಂದ ಕಣಕ್ಕಿಳಿಸಲು ಫ್ಲ್ಯಾನ್ ಮಾಡಿದ್ದಾರೆ. ಈಗಾಗಲೇ ಹಳ್ಳೂರು ಅವರನ್ನು ಸಂಪರ್ಕಿಸಿದ್ದು, ಸ್ಪಷ್ಟ ಅಭಿಪ್ರಾಯ ತಿಳಿಸಲು ಜ.3ರವರೆಗೆ ಸಮಯ ನೀಡಿದ್ದಾರೆ. ಗಂಗಾವತಿಯಲ್ಲಿ ಸ್ಪರ್ಧಿಸಲು ಮುಂದಾಗಿರುವ ರೆಡ್ಡಿ, ಪಕ್ಕದ ಕುಷ್ಟಗಿಯಲ್ಲೂ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಸಜ್ಜಾಗಿದ್ದಾರೆ.
![]() |
![]() |
![]() |
![]() |
![]() |
[ays_poll id=3]