K2kannadanews.in
Local News ರಾಯಚೂರು : ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲಹಾಸನ್ ಭಾವಚಿತ್ರ ಸುಟ್ಟು, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶವನ್ನು ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಹೊರಹಾಕಿದ್ದು, ಕಮಲಹಾಸನ್ ಕನ್ನಡಿಗರ ಕ್ಷಮೆಯಾಚನೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಕಮಲಹಾಸನ್ ತಮಿಳು ಚಿತ್ರಗಳು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಅಂತ ಒತ್ತಾಯ ಮಾಡಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಕರಣ ದಾಖಲಿಸಬೇಕು ಎಂದು ಅಸಮಧಾನ ಹೊರಹಾಕಿದ್ದಾರೆ.