![]() |
![]() |
![]() |
![]() |
![]() |
ರಾಯಚೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದ ಕಡೆ ಅನ್ಯಾಯ ಭ್ರಷ್ಟಾಚಾರ ತಾಂಡವ ಮಾಡುತ್ತಿತ್ತು. ಕರ್ನಾಟಕವನ್ನು ಎಟಿಎಂಯನ್ನಾಗಿ ಮಾಡಿಕೊಂಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರದಲ್ಲಿ ಇರುವಾಗ ಒಳ್ಳೆಯ ಸರ್ಕಾರ ನೀಡಿದೆಯಾ ಎಂದು ಪ್ರಶ್ನಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ. ಬದಲಾಗಿ ರಾಜ್ಯವನ್ನು ಎಟಿಎಂ ತರಹ ಮಾಡಿಕೊಂಡು ಬಳಸಿಕೊಂಡಿತ್ತು ಎಂದು ಆರೋಪಿಸಿದರು. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಭಿವೃದ್ಧಿಗೆ 4500 ಕೋಟಿ ರೂಪಾಯಿ ನೀಡಲಾಗಿದೆ. ಜಲಜೀವನ ಮಿಷನ್ ಯೋಜನೆ, ಕೃಷ್ಣ ಜಲಭಾಗ್ಯ ನಿಗಮ, ಲೋಕೋಪಯೋಗಿ ಸೇರಿದಂತೆ ಹಲವು ಇಲಾಖೆ ಕಾಮಗಾರಿ ಉದ್ಘಾಟಿಸಿರುವುದು ಸಂತೋಷವಾಗುತ್ತಿದ್ದು, ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಮೈತ್ರಿ ಸರ್ಕಾರಕ್ಕೆ ಅವಕಾಶ ನೀಡಬೇಡಿ : ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 104 ಸ್ಥಾನಗಳಲ್ಲಿ ಗೆದ್ದಿದ್ದರು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದರು. ಆದರೆ ಈ ಬಾರಿ ಆ ತಪ್ಪನ್ನು ಮಾಡದೆ ರಾಜ್ಯದ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಾರ್ಟಿಗೆ ಬೆಂಬಲಿಸಿ, ಸಂಪೂರ್ಣ ಬಹುಮತದಿಂದ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದರು.
![]() |
![]() |
![]() |
![]() |
![]() |
[ays_poll id=3]