
K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಾಗುತ್ತಿರುವ ಪ್ರಗತಿಯ ಸಾಧನೆಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸಗಿರಿ ನೀಡಿದ್ದಾರೆ. ನೀರಾವರಿ ಯೋಜನೆಗಳ ಜಾರಿಗೆ ಡಬಲ್ ಇಂಜಿನ್ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಯಾದಗಿರಿ ಸಮೃದ್ಧ ಇತಿಹಾಸವನ್ನು ಹೊಂದಿದೆ. ರಟ್ಟಿಹಳ್ಳಿಯ ಹಳೆಯ ಕೋಟೆ ನಮ್ಮ ಪೂರ್ವಜರ ಸಾಮರ್ಥ್ಯದ ಪ್ರತೀಕ. ಯಾದಗಿರಿಯು ನಮ್ಮ ಸಂಸ್ಕೃತಿ ಪರಂಪರೆಯೊಂದಿಗೆ ಹೊಂದಿಕೊಂಡಿದೆ. ತಮ್ಮ ಆಡಳಿತದ ಮೂಲಕ ಸುರಪುರದ ವೆಂಕಟಪ್ಪ ನಾಯಕರು ಯಾದಗಿರಿಯನ್ನು ದೇಶಾದ್ಯಂತ ಖ್ಯಾತಿಗೊಳಿಸಿದ್ರು. ಈ ಬಗ್ಗೆ ನಮಗೆಲ್ಲರಿಗೂ ಗರ್ವ ಇದೆ. ಯಾದಗಿರಿಯಲ್ಲಿ ಸಾವಿರಾರು ಕೋಟಿ ಮೌಲ್ಯದ ನೀರಾವರಿ ಹಾಗೂ ರಸ್ತೆಯ ಅತಿದೊಡ್ಡ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಮತ್ತು ಆಧುನೀಕರಣದಿಂದ ಯಾದಗಿರಿ, ಕಲಬುರಗಿ, ವಿಜಯಪುರದ ಲಕ್ಷಾಂತರ ರೈತರಿಗೆ ನೇರ ಲಾಭ ಆಗಲಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಲಕ್ಷಾಂತರ ಜನರಿಗೆ ಶುದ್ಧ ಕುಡಿಯುವ ನೀರು ಸಿಗಲಿದೆ ಎಂದು ಪ್ರಧಾನಿಗಳು ಹೇಳಿದರು.
ಸೂರತ್- ಚೆನ್ನೈ ಆರ್ಥಿಕ ಕಾರಿಡಾರ್ನ ಭಾಗ ಕರ್ನಾಟಕದಲ್ಲೂ ಇದೆ. ಇದರ ಕೆಲಸ ಇಂದು ಶುರು ಆಗಿದೆ. ಈ ಮೂಲಕ ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಯ ಜನರ ಜೀವನ ಉತ್ತಮವಾಗಲಿದೆ ಹಾಗೂ ಉದ್ಯೋಗ ಸಿಗಲಿದೆ. ಇದರ ಜತೆಗೆ ಉತ್ತರ ಕರ್ನಾಟಕದ ಅಭಿವೃದ್ದಿ ಶರವೇಗದಲ್ಲಿ ಸಾಗುತ್ತಿದೆ.
ಕಾಂಗ್ರೆಸ್ನದ್ದು ವೋಟ್ ಬ್ಯಾಂಕ್ ರಾಜಕೀಯ : ಹಿಂದೆ ತಪ್ಪು ರಾಜಕೀಯ ನೀತಿಗಳು ಮತ್ತು ನಿರ್ಧಾರಗಳಿಂದ ನಾವು ಪಾಠ ಕಲಿತಿದ್ದೇವೆ. ನಮ್ಮ ಮುಂದೆ ಯಾದಗಿರಿ ಮತ್ತು ಉತ್ತರ ಕರ್ನಾಟಕದ ಉದಾಹರಣೆ ಇದೆ. ಈ ಕ್ಷೇತ್ರದ ಸಾಮರ್ಥ್ಯ ಕಮ್ಮಿ ಇಲ್ಲ. ಆದರೂ ಇದು ವಿಕಾಸದ ಯಾತ್ರೆಯಲ್ಲಿ ಬಹಳ ಹಿಂದೆ ಉಳಿದುಕೊಂಡಿದೆ. ಹಿಂದಿನ ಸರ್ಕಾರ ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳನ್ನು ಹಿಂದುಳಿದ ಜಿಲ್ಲೆ ಎಂದು ಘೋಷಿಸಿ ಸುಮ್ಮನಿದ್ದರು. ಹೀಗಿದ್ರೆ ಬಡತನ ಹೇಗೆ ಕಡಿಮೆ ಆಗುತ್ತದೆ. ವಿದ್ಯುತ್, ನೀರಾವರಿ, ರಸ್ತೆ ಅಭಿವೃದ್ಧಿಗಳಿಗೆ ಸಮಯ ಕೊಡುವ ಕಾಲದಲ್ಲಿ ವೋಟ್ ಬ್ಯಾಂಕ್ ರಾಜಕೀಯ ಮಾಡಿದರು. ಇದರ ನಷ್ಟವನ್ನು ಕರ್ನಾಟಕ ನೋಡಿದೆ. ಈಗ ನಮ್ಮ ಸರ್ಕಾರ ಆ ಹಣೆಪಟ್ಟಿ ಕಳಚುವ ಕೆಲಸ ಮಾಡ್ತಿದೆ. ನಮ್ಮ ಪ್ರಾಥಮಿಕ ಕೆಲಸ ವಿಕಾಸ ಆಗಿದೆ. ಯಾವುದೇ ಜಿಲ್ಲೆ ಅಭಿವೃದ್ಧಿಯಿಂದ ಹಿಂದೆ ಉಳಿದರೆ ದೇಶದ ವಿಕಾಸ ಸಾಧ್ಯವಿಲ್ಲ. ಇದಕ್ಕೆ ಯಾದಗಿರಿ ಜಿಲ್ಲೆಯೂ ಸೇರಿದಂತೆ ದೇಶದ 100 ಜಿಲ್ಲೆಗಳಲ್ಲಿ ಆಕಾಂಕ್ಷ ಜಿಲ್ಲೆಗಳ ಯೋಜನೆ ಪ್ರಾರಂಭಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಎನ್ಇಪಿ ಜತೆಯಲ್ಲಿ ವಿದ್ಯಾನಿಧಿ : ವಿದ್ಯಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ನ್ಯಾಷನಲ್ ಎಜುಕೇಷನ್ ಪಾಲಿಸಿ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಜಾರಿ ಮೂಲಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆ ಆಗಿದೆ. ಮಹಾಮಾರಿಯ ನಡುವೆಯೂ ಕರ್ನಾಟಕ ದೇಶದಲ್ಲಿ ಅಭಿವೃದ್ಧಿಯ ಪ್ರಗತಿಯಲ್ಲಿ ಮುನ್ನುಗ್ಗುತ್ತಿದೆ. ಸ್ವಾತಂತ್ರ್ಯ ಪಡೆದು ಇಷ್ಟು ವರ್ಷದ ನಂತರವೂ ಯಾವುದಾದರೂ ವ್ಯಕ್ತಿ ಯೋಜನೆಗಳಿಂದ ವಂಚಿತವಾಗಿದ್ದರೆ ಆ ವ್ಯಕ್ತಿಗೆ ನಮ್ಮ ಸರ್ಕಾರ ಎಲ್ಲ ರೀತಿಯ ಯೋಜನೆಗಳನ್ನು ಮುಟ್ಟಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
![]() |
![]() |
![]() |
![]() |
![]() |
[ays_poll id=3]