![]() |
![]() |
![]() |
![]() |
![]() |
ರಾಯಚೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲಿಯೇ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿಯಿಂದ ಕಲಬುರಗಿಗೆ ಹೋಗುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್‌ಗೆ ಇಂದು ಮಧ್ಯಾಹ್ನದ ವೇಳೆ ಬೈಕ್‌ನಲ್ಲಿ ಹೋಗುವ ದಂಪತಿ ಡಿಕ್ಕಿ ಹೊಡೆದಿದ್ದಾರೆ. ಇನ್ನು ಬಸ್‌ಗೆ ಡಿಕ್ಕಿ ಹೊಡೆದ ಬೆನ್ನಲ್ಲೇ ತೀವ್ರ ಗಾಯಗೊಂಡ ರಸ್ತೆಗೆ ಬಿದ್ದ ದಂಪತಿ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆಯೇ ಬಸ್‌ನ ಚಾಲಕ ಹಾಗೂ ನಿರ್ವಾಹಕರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ದೇಹಗಳನ್ನು ಮಸ್ಕಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡದ್ದಾರೆ.
ಮೃತರನ್ನ ಲಕ್ಷ್ಮಿ (26), ಅಮರೇಗೌಡ ( 30) ಎಂದು ಗುರುತಿಸಲಾಗಿದೆ. ಮೃತ ದಂಪತಿಯನ್ನು ಸಿಂಧನೂರು ತಾಲೂಕಿನ ರತ್ನಾಪುರ ಗ್ರಾಮದವರಾಗಿದ್ದಾರೆ. ಇನ್ನು ಸಾರಿಗೆ ಇಲಾಖೆಯ ಬಸ್ ಅನ್ನು ನಿಲ್ಲಿಸಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದು, ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಘಟನೆ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
![]() |
![]() |
![]() |
![]() |
![]() |
[ays_poll id=3]