K2kannadanews.in
Crime News ಸಿರವಾರ : ಶಾಲೆಗೆ ರಜೆ ಇರುವ ಹಿನ್ನಲೆಯಲ್ಲಿ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಬಾಲಕ ಈಜು ಬಾರದೆ ಮುಳುಗಿ ಮೃತಪಟ್ಟಿರುವ ಘಟನೆ ಲಕ್ಕಂದಿನ್ನಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಲಕ್ಕಂದಿನ್ನಿ ಗ್ರಾಮದ ಬಳಿ ಘಟನೆ ನಡೆದಿದ್ದು, ಅದೇ ಗ್ರಾಮದ ಹುಸೇನಿ(10) ಮೃತ ದುರ್ದೈವಿ ಬಾಲಕ ಎಂದು ತಳಿದು ಬಂದಿದೆ. ಶಾಲೆಗೆ ರಜೆ ಹಿನ್ನೆಲೆ ಸ್ನೇಹಿತರೊಂದಿಗೆ ಈಜಾಡಲು ಕೆರೆಗೆ ಹೋಗಿದ್ದ. ಈ ವೇಳೆ ನೀರಿಗೆ ಹಾರಿದಾಗ ಆಳ ಹೆಚ್ಚಿರುವ ಕಾರಣ ಈಜು ಬಾರದೆ ಕೆರೆಯಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಮೃತ ದೇಹ ಸರ್ಕಾರಿ ಆಸ್ಪತ್ರೆಗೆ ರವಾನೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..