This is the title of the web page
This is the title of the web page
Local NewsVideo News

ಗಣೆಕಲ್ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ..!


K2kannadanews.in

Leopard ದೇವದುರ್ಗ : ಕಳೆದ ಮೂರು ನಾಲ್ಕು ದಿನಗಳಿಂದ ಎನ್ ಗಣೆಕಲ್ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು (Leopard sighting), ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಆದರೆ ಅರಣ್ಯ ಇಲಾಖೆ (Forest deportment) ಸಿಬ್ಬಂದಿಗಳು ಯಾರು ಇತ್ತ ತಿರುಗಿ ನೋಡುತ್ತಿಲ್ಲ ಎಂದು ಗ್ರಾಮಸ್ಥರ ದೂರಾಗಿದೆ.

ಹೌದು ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಎನ್ ಗಣೇಕಲ್ ಗ್ರಾಮದಲ್ಲಿ, ಕಳೆದ ಮೂರು ನಾಲ್ಕು ದಿನಗಳಿಂದ ಚಿರತೆ (Leopard sighting) ಪ್ರತ್ಯಕ್ಷವಾಗುತ್ತಿದೆ. ಕರುವಿನ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಗ್ರಾಮಸ್ಥರು ಓಡಿಸಿ ರಕ್ಷಿಸಿಕೊಂಡಿದ್ದಾರೆ. ಗ್ರಾಮದ ಪಕ್ಕದಲ್ಲಿರುವ ಬೆಟ್ಟದಲ್ಲಿ ಚಿರತೆ ವಾಸವಾಗಿದ್ದು, ರಾತ್ರಿ ವೇಳೆಯಲ್ಲಿ ಗ್ರಾಮದ ಸುತ್ತಮುತ್ತ ಓಡಾಡುತ್ತಿದೆ.

ಚಿರತೆ ಓಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಬೆಟ್ಟದ ತುದಿಯಲ್ಲಿ ಸರಕಾರಿ ಶಾಲೆ ಇರುವುದರಿಂದ ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ಜನಪ್ರತಿನಿಧಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಸಮಾಧಾನವಾಗಿದೆ.


[ays_poll id=3]