ಎಲ್ಲರಿಗೂ ಅವಕಾಶವಿರುವ ನವ ಕರ್ನಾಟಕ ನಿರ್ಮಿಸೋಣ : ಸಿಎಂ
![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ನವ ಕರ್ನಾಟಕದಲ್ಲಿ ಎಲ್ಲಾರಿಗೂ ಅವಕಾಶವಿರುವ, ಸಮೃದ್ಧಿ ಇರುವ ನಾಡು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಅವರು ಇಂದು ಅವರು ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಬ ದೇವಸ್ಥಾನಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿ ಬಂಡಿಗಣಿ ಮಠ ಗ್ರಾಮದಲ್ಲಿ ಮಾತನಾಡಿದರು. ಕಾಯಕ ಹಾಗೂ ಕರ್ತವ್ಯದಲ್ಲಿ ಬಹಳ ವ್ಯತ್ಯಾಸವಿದೆ. ಕರ್ತವ್ಯ ದಿಂದ ಬಂದ ಉತ್ಪಾದನೆಗಳನ್ನು ದಾಸೋಹ ಮೂಲಕ ನೀಡಿದಾಗ ಅದು ಕಾಯಕ ಆಗುತ್ತದೆ. ಕಾಯಕನಿಷ್ಠೆಯನ್ನು ಪರಮಪೂಜ್ಯ ರು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಭಕ್ತಿ ಎಂಬುವುದು ಉತ್ಕೃಷ್ಟ ಪ್ರೀತಿ. ಕರಾರುರಹಿತ ಪ್ರೀತಿ ಭಕ್ತರಲ್ಲಿ ಬಂದಾಗ ಭಗವಂತ ಆಶೀರ್ವಾದ ಮಾಡುತ್ತಾನೆ.
*ಎಲ್ಲಾ ರಂಗದಲ್ಲಿ ಅಭಿವೃದ್ಧಿ*
ಶಾಸಕ ಸಿದ್ದು ಸವದಿಯವರ ನೇತೃತ್ವದಲ್ಲಿ ಈ ಭಾಗ ಹಿಂದೆಂದೂ ಕಾಣದ ಅಭಿವೃದ್ಧಿ ಕಂಡಿದೆ. ಎಲ್ಲಾ ರಂಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಎಲ್ಲಾ ಜನಾಂಗದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
![]() |
![]() |
![]() |
![]() |
![]() |