K2kannadanews.in
Accident News ಲಿಂಗಸೂಗೂರು : ರೋಡ್ ಬ್ರೇಕರ್ ಡಾಟಾ ತಿದ್ದ ಬೇಳೆ ನಿಯಂತ್ರಣ ತಪ್ಪಿ ಬೈಕ್ ಸವಾರರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಛತ್ತರ ಗ್ರಾಮದ ಬಳಿ ಘಟನೆ ಜರುಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ರಾಯಚೂರಿನಿಂದ ಕೊಪ್ಪಳ ಕಡೆಗೆ ಹೊರಟಿದ್ದ ಬೈಕ್ ಸವಾರರು, ರೋಡ್ ಬ್ರೇಕರ್ ಬಳಿ ಸವಾರನ ನಿಯಂತ್ರಣ ತಪ್ಪಿ ಅಪಘಾತ ಜರುಗಿದೆ ಎಂದು ಹೇಳಲಾಗುತ್ತಿದೆ. ನಿಯಂತ್ರಣ ತಪ್ಪಿ ಕೆಳಗೆ ಬೀಳುತ್ತಿದ್ದಂತೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿದ್ದಾರೆ. ಸರಕು ಸಾಧಿಸುತ್ತಿದ್ದ ಲೋಡೆಡ್ ಲಾರಿ ಆಗಿದ್ದರಿಂದ ಸ್ಥಳದಲ್ಲೇ ಸವಾರರು ಸಾವನ್ನಪ್ಪಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮುದಗಲ್ ಪೊಲೀಸರ ಸ್ಥಳ ಪರಿಶೀಲನೆ ನಡೆಸಿದ್ದಾರೆ.