
ರಾಯಚೂರು: ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳು ಅಳೆದು ತೂಗಿ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡ್ತಿವೆ. ಕಾಂಗ್ರೆಸ್ ತನ್ನ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದ್ರೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.
ಹೀಗಾಗಿ ಲಿಂಗಸುಗೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರಾಗ್ತಾರೆ ಅನ್ನೋ ಕುತೂಹಲ ಕ್ಷೇತ್ರದ ಮತದಾರರಲ್ಲಿ ಹೆಚ್ಚಾಗಿದೆ. ಯಾಕಂದ್ರೆ ಈಗಾಗಲೇ ಬಿಜೆಪಿ, ಜೆಡಿಎಸ್ ಲಿಂಗಸುಗೂರು ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದೆ. ಬಿಜೆಪಿಯಿಂದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಹಾಗೂ ಜೆಡಿಎಸ್‌ನಿಂದ ಸಿದ್ದು ಬಂಡಿ ಕಣದಲ್ಲಿದ್ದು, ಭರ್ಜರಿ ಪ್ರಚಾರ ಮಾಡ್ತಿದ್ದಾರೆ.
ಭಾರೀ ಪೈಪೋಟಿ : ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ. ಬೋವಿ ಸಮಾಜದ ಹಾಲಿ ಕಾಂಗ್ರೆಸ್ ಶಾಸಕ ಡಿ.ಎಸ್. ಹೂಲಗೇರಿ ಇದ್ರೂ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಿಸಿಲ್ಲ. ಎಡಗೈ, ಬಲಗೈ ಹೆಸರಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ಬಣ ರಾಜಕೀಯ ಜೋರಾಗಿದೆ.
ನಡೆ ಇನ್ನೂ ನಿಗೂಢ : ಬೋವಿ ಸಮಾಜದ ಶಾಸಕ ಡಿ.ಎಸ್. ಹೂಲಗೇರಿ, ಎಡಗೈ ಬಣದಿಂದ ಎಚ್.ಬಿ. ಮುರಾರಿ, ಪಾಮಯ್ಯ ಮುರಾರಿ, ಹನುಮಂತಪ್ಪ ಆಲ್ಕೋಡ್, ಬಲಗೈ ಬಣದ ಆರ್. ರುದ್ರಯ್ಯ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಕಸರತ್ತು ನಡೆಸಿದ್ದಾರೆ. ಆದ್ರೆ ಕಾಂಗ್ರೆಸ್ ಹೈಕಮಾಂಡ್ ನಡೆ ಮಾತ್ರ ಇನ್ನೂ ನಿಗೂಢವಾಗಿದೆ.
ಟಿಕೆಟ್ ಕೈತಪ್ಪುತ್ತಾ.? : ಲಿಂಗಸುಗೂರು ಕ್ಷೇತ್ರದ ಹಾಲಿ ಶಾಸಕ ಡಿ.ಎಸ್. ಹೂಲಗೇರಿಗೆ ಟಿಕೆಟ್ ಕೊಡಬೇಡಿ ಅನ್ನೋ ಕೂಗು ಜೋರಾಗಿದೆ. ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಸ್ಥಳೀಯ ಮುಖಂಡರು, ಕಾಂಗ್ರೆಸ್ ಹೈಕಮಾಂಡ್ ಮನೆ ಬಾಗಿಲ ಕದತಟ್ಟಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಮಾದಿಗ ಸಮುದಾಯದವರೇ ನಿರ್ಣಯಕವಾಗಿದ್ದು, ಮಾದಿಗ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದಾರೆ. ಹೀಗಾಗಿ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ.
ಟಿಕೆಟ್ ಯಾರಿಗೆ? : ಒಟ್ಟಿನಲ್ಲಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗ ಭಾರೀ ಪೈಪೋಟಿ ಶುರುವಾಗಿದೆ. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತಾ ಅಥವಾ ಹೊಸ ಮುಖಂಡರಿಗೆ ಟಿಕೆಟ್ ನೀಡುತ್ತಾರಾ ಎಂಬುವುದು ಕಾದು ನೋಡಬೇಕಾಗಿದೆ.
![]() |
![]() |
![]() |
![]() |
![]() |
[ays_poll id=3]